ಇತ್ತೀಚಿನ ಸುದ್ದಿ
ಸರಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳಕ್ಕೆ ರಾಜ್ಯ ಹಣಕಾಸು ಇಲಾಖೆ ನಕಾರ
10/05/2022, 09:54
ಬೆಂಗಳೂರು(reporterkarnataka.com): ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅತಿಥಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳದ ಮನವಿಯನ್ನು ಹಣಕಾಸು ಇಲಾಖೆ ತಿರಸ್ಕರಿಸಿದೆ.
ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರಿಗೆ ತಿಂಗಳಿಗೆ 7,500 ರೂ.ಗೌರವಧನ ನೀಡಲಾಗುತ್ತಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ “ಬಿ.ಸಿ.ನಾಗೇಶ್” ಅವರು ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವನ್ನು ಹೆಚ್ಚಿಸಬೇಕೆಂಬ ಅವರ ಮನವಿಯನ್ನು ಹಣಕಾಸು ಇಲಾಖೆ ಈಗಾಗಲೇ ತಿರಸ್ಕರಿಸಿದೆ.ಉನ್ನತ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಗಳ ಗೌರವಧನವನ್ನು ಹೆಚ್ಚಿಸಿದ ನಂತರ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರು ಉತ್ತಮ ವೇತನದ ನಿರೀಕ್ಷೆಯಲ್ಲಿದ್ದಾರೆ.
ಮುಂಬರುವ ಶೈಕ್ಷಣಿಕ ವರ್ಷದಲ್ಲಿ (2022-23) ಸಾರ್ವಜನಿಕ ಶಿಕ್ಷಣ ಇಲಾಖೆ (ಡಿಪಿಐ) 27,000 ಕ್ಕೂ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಯೋಚಿಸಿದೆ.