ಇತ್ತೀಚಿನ ಸುದ್ದಿ
ಆಸ್ಪತ್ರೆಗೆ ಸಚಿವ ಕೋಟ ಭೇಟಿ; ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಣೆ
11/05/2022, 08:58

ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಿಸಿದರು.
ನಂತರ ಸಚಿವರು ಸುಕ್ರಿ ಬೊಮ್ಮಗೌಡ ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರ ಜತೆ ಅವರ ಆರೋಗ್ಯ ಕುರಿತು ಚರ್ಚಿಸಿದರು. ಸಚಿವರ ಜತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.