8:56 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು

11/05/2022, 20:14

ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ. ಟೊಮೇಟೊ ಜ್ವರ ಇದೊಂದು ಅಪರೂಪದ ವೈರಲ್ ಸೋಂಕು ಆಗಿದೆ. ಈ ಜ್ವರದಲ್ಲಿ ಬಳಲುತ್ತಿರುವ ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು