5:39 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಕುಸಿತ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ: ಮಿಥುನ್ ರೈ ಆಗ್ರಹ

16/06/2021, 09:39

ಮಂಗಳೂರು(reporterkarnataka news): ಮರವೂರು ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕೆಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ  ಒತ್ತಾಯಿಸಿದರು.

ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಮರವೂರು ಸೇತುವೆ ದುರಂತ ಸಂಭವಿಸಿದೆ. ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು