ಇತ್ತೀಚಿನ ಸುದ್ದಿ
ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆ
14/05/2022, 17:28
ಅಬುದಾಬಿ(reporterkarnataka.com): ಯುನೈಟೆಡ್ ಅರಬ್ ಎಮಿರೇಟ್ಸ್ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಆಯ್ಕೆಯಾಗಿದ್ದಾರೆ.
ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನರಾಗಿದ್ದರು. ಅಧ್ಯಕ್ಷರ ನಿಧನಕ್ಕೆ ರಾಷ್ಟ್ರಪತಿ ವ್ಯವಹಾರಗಳ ಸಚಿವಾಲಯವು ಶುಕ್ರವಾರದಿಂದ 40 ದಿನಗಳ ಕಾಲ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿತ್ತು. ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಕೆಲಸಗಳನ್ನು ಶುಕ್ರವಾರದಿಂದ ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.