1:33 AM Thursday28 - November 2024
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ…

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್ ಪಾಸ್ ಕುರಿತು ಗೊಂದಲ ಬೇಡ: ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳೇ ಪ್ರಯಾಣಿಸಿ 

15/05/2022, 09:06

ಸಾಂದರ್ಭಿಕ ಚಿತ್ರ
ಬೆಂಗಳೂರು(reporterkarnataka.com): ಮೇ16ರಿಂದ ಶಾಲಾ-ಕಾಲೇಜುಗಳು  ರಾಜ್ಯಾದ್ಯಂತ
ಆರಂಭಗೊಳ್ಳಲಿದ್ದು, ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಗೊಂದಲ ಬೇಡ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆ ಎಸ್ ಆರ್ ಟಿ ಸಿ ನೀಡಿರುವಂತ ವಿದ್ಯಾರ್ಥಿ ಬಸ್ ಪಾಸ್ ತೋರಿಸಿಕೊಂಡು, ತನ್ನ ನಿಗಮದ ಬಸ್ ಗಳಲ್ಲಿ ಸಂಚರಿಸುವಂತೆ ತಿಳಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.

ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಲು ಅನುಮತಿಸಿದೆ. ಈ ಹಿಂದೆ ನೀಡಿರುವಂತ ಬಸ್ ಪಾಸ್ ಮಾನ್ಯತೆ ಜೂನ್ 30, 2022ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.

ಇನ್ನೂ ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರವೇ ತಿಳಿಸಲಾಗುತ್ತದೆ. ಆ ನಂತ್ರ ವಿದ್ಯಾರ್ಥಿಗಳು ನಿಯಮಾನುಸಾರ ಉಚಿತ, ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ವಿಭಾಗಗಳ ವ್ಯಾಪ್ತಿಯಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು