6:38 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ: ಕೆಎಸ್ಸಾರ್ಟಿಸಿ ಸ್ಪಷ್ಟನೆ

16/05/2022, 17:51

ಬೆಂಗಳೂರು(reporterkarnataka.com):ಮಕ್ಕಳ ‌ಪ್ರಯಾಣ ದರವನ್ನು 6 ವರುಷ ಮೇಲ್ಪಟ್ಟವರಿಗೆ ಮಾತ್ರ ವಿಧಿಸಲಾಗುತ್ತಿದೆ.

3 ವರುಷದ ಮಕ್ಕಳಿಗೆ ಯಾವುದೇ ಪ್ರಯಾಣ ದರ ವಿಧಿಸುತ್ತಿಲ್ಲ ಎಂದು ಕೆಎಸ್ಸಾರ್ಟಿಸಿ ಸ್ಪಷ್ಟನೆ‌ ನೀಡಿದೆ. 

ಮಕ್ಕಳ‌ ಪ್ರಯಾಣ ದರದಲ್ಲಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ. 3 ವರುಷದ ಮಕ್ಕಳಿಗೂ ಪ್ರಯಾಣ ದರ ಎಂಬ ಸುದ್ದಿಗೆ ಸಂಬಂದಪಟ್ಟಂತೆ ಕೆಎಸ್ಸಾರ್ಟಿಸಿ ವಿವರಣೆ‌ ನೀಡಿದೆ‌.

ಮಕ್ಕಳಿಗೆ ಪ್ರಯಾಣ ದರ ವಿಧಿಸುವಾಗ 6 ವರುಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣ ,‌6 – 12 ವರುಷದೊಳಗಿನ‌ ಮಕ್ಕಳಿಗೆ ಅರ್ಧ ಪ್ರಯಾಣ ದರ, 12 ವರುಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಪ್ರಯಾಣ ದರವನ್ನು ವಿಧಿಸಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ,‌ ಮಕ್ಕಳು 4-5 ವರುಷ ಆಗಿದ್ದಾಗ ,6 ವರುಷವಾಗಿರುವ ಮಕ್ಕಳಂತೆ, ಅದೇ ರೀತಿ 11-12 ವರುಷದ ಮಕ್ಕಳು 13 ವರುಷದ ಮಕ್ಕಳಂತೆ ಕಾಣುವ ಸಂದರ್ಭಗಳಲ್ಲಿ ಮಕ್ಕಳ ಪಾಲಕರು/ಪೋಷಕರು ಹಾಗೂ ಬಸ್ಸಿನ ಚಾಲನಾ ಸಿಬ್ಬಂದಿಗಳ ನಡುವೆ ಟಿಕೇಟ್ ಪಡೆಯುವಂತೆ  ಗಲಾಟೆಗಳು ವರದಿಯಾಗುತ್ತಿರುವ ಬಗ್ಗೆ ಮನಗಂಡು ಅಕ್ಟೋಬರ್ 2021 ರಲ್ಲಿ ಸ್ಪಷ್ಟ ಸುತ್ತೋಲೆಯನ್ನು ಸಹ ಹೊರಡಿಸಲಾಗಿದೆ. 

ಈ‌ ಬಗ್ಗೆ ಚಾಲನಾ ಸಿಬ್ಬಂದಿಗಳಿಗೂ  ತಿಳುವಳಿಕೆ ನೀಡಲಾಗಿದೆ ಎಂಬುದನ್ನು ಮತ್ತೊಮ್ಮೆ ತಮ್ಮ ಆದ್ಯ ಮಾಹಿತಿಗಾಗಿ ತರಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು