10:13 AM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ರಾಜ್ಯದೆಲ್ಲೆಡೆ ಭಾರೀ ಮಳೆ: ಕರಾವಳಿಯಲ್ಲಿ ರೆಡ್, ಮಲೆನಾಡಲ್ಲಿ ಆರೆಂಜ್ ಅಲರ್ಟ್; ಹಲವೆಡೆ ಮರ ಧರಾಶಾಯಿ

17/05/2022, 07:37

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶ ಭರಿತ ಮೋಡಗಳ ಪರಿಣಾಮ ರಾಜ್ಯದಲ್ಲಿ ಸೋಮವಾರದಿಂದ ಮಳೆ ಮತ್ತಷ್ಟು ತೀವ್ರಗೊಂಡಿದೆ.

ಮಲೆನಾಡು, ಕರಾವಳಿ ಸೇರಿ ಬಹುತೇಕ ಕಡೆ ಸೋಮವಾರದಿಂದ ಮಳೆಯಾಗುತ್ತಿದೆ. ಮಲೆನಾಡಲ್ಲಿ ಸಂಜೆ ಮೇಲೆ ಮಳೆಯಾಗುತ್ತಿದೆ.

ಮೇ 18ರಿಂದ ಇನ್ನಷ್ಟು ಚುರುಕು: ಭಾನುವಾರವೂ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದ್ದು, ಬಾಗಲಕೋಟೆಯಲ್ಲಿ 87 ಮಿಮೀ, ಕೋಲಾರದ ಟಮಕಾದಲ್ಲಿ 77 ಮಿಮೀ, ಮೈಸೂರಿನ ಸುತ್ತೂರಿನಲ್ಲಿ 21 ಮಿಮೀ ಮಳೆ ಬಿದ್ದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ,ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮಲೆನಾಡಲ್ಲಿ ಮಳೆಗೆ ಭಾರಿ ಅನಾಹುತ ನಡೆದಿದೆ.ಹಲವೆಡೆ ಮರ ಬಿದ್ದು ರಸ್ತೆ ಬಂದ್ ಆಗಿದೆ. ಇದರ ಪರಿಣಾಮ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಸಾಗರ, ಹೊಸನಗರ, ರಿಪ್ಪಿನಪೇಟೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು ಒಂದೇ ಸಮನೆ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗದಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆಯ ಗಾಂಧಿಘರ್ ಸಮೀಪದಲ್ಲಿ ಬೃಹದಾಕಾರದ ಮರವೊಂದು ರಸ್ತೆಗೆ ಉರುಳಿರುವ ಪರಿಣಾಮ ವಾಹನ ಸಂಚಾರಕ್ಕೆ ಕಳೆದ ಒಂದು ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಸ್ಥಗಿತಗೊಂಡಿದೆ. ಇನ್ನು ತೀರ್ಥಹಳ್ಳಿಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆ, ಗುಡುಗಿನ ಆರ್ಭಟಕ್ಕೆ ಕರೆಂಟ್ ಇಲ್ಲದೆ ಜನ ಪರದಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು