7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮತ್ತೆ ವಾಯುಭಾರ ಕುಸಿತ: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮಳೆ ನಿರೀಕ್ಷೆ

17/05/2022, 15:55

ಬೆಂಗಳೂರು(reporterkarnataka.com); ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮತ್ತೆ ಮತ್ತೆ ವಾಯುಭಾರ ಕುಸಿತ ಕಾಣಲಾರಂಭಿಸಿದೆ. ಇದೀಗ ಮಧ್ಯ ಕೇರಳ ಕಡಲ ತೀರದ ಸಮೀಪ ವಾಯುಭಾರ ಕುಸಿತದ ಲಕ್ಷಣ ಗೋಚರಿಸಿದ್ದು, ದಕ್ಷಿಣ ಕರ್ನಾಟಕದ ಮೇಲೂ ಇದರ ಪ್ರತಿಕೂಲ ಪರಿಣಾಮ ಬೀರಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ  ಭರ್ಜರಿ ಮಳೆ ನಿರೀಕ್ಷಿಸಲಾಗಿದೆ. 

ಮೇ 19ರ ತನಕ ಈ ವಾತಾವರಣ ಮುಂದುವರಿಯಲಿದೆ. ಬಳಿಕ ಕರಾವಳಿ ಸಹಿತ ರಾಜ್ಯದಲ್ಲಿ ಮಳೆಯ ತೀವ್ರತೆ ಕ್ಷೀಣವಾಗಲಿದೆ. ಜೊತೆಗೆ ವಾತಾವರಣದಲ್ಲಿನ ಈ ವಿದ್ಯಮಾನ ಮುಂಗಾರು ಆಗಮನದ‌ ಅವಧಿಯಲ್ಲಿ ವ್ಯತ್ಯಯ ಉಂಟುಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಿಸಿದ್ದಾರೆ.

ಎಲ್ಲೆಲ್ಲಿ ಭಾರೀ ಮಳೆ..?: ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢದಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಎಲ್ಲೆಲ್ಲಿ ಸಾಧಾರಣ ಮಳೆ..?: ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮೀನುಗಾರರು ಕಡಲಿಗಿಳಿಯದಂತೆ ಈಗಾಗಲೇ ಆಡಳಿತಗಳು ಎಚ್ಚರಿಕೆ ನೀಡಿದ್ದು, ನಾಗರೀಕರೂ ಅನಾವಶ್ಯಕವಾಗಿ ಮಳೆಗೆ ಮೈಯೊಡ್ಡದಂತೆ ಎಚ್ಚರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು