8:34 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಕೋವಿಡ್ ಸೋಂಕಿತರ ಪ್ರಮಾಣ ತಗ್ಗಿಸಲು  ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚನೆ

16/06/2021, 10:35

ಮಂಗಳೂರು (reporterkarnataka news): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತ್ತಿಯಲ್ಲಿ ಪ್ರಸ್ತುತ ಶೇ.17ರಷ್ಟು ಕೋವಿಡ್ ಸೋಂಕಿತರ ಪ್ರಮಾಣ ವರದಿಯಾಗುತ್ತಿದ್ದು ಕೋವಿಡ್ ಪರೀಕ್ಷೆ ಪ್ರಮಾಣವನ್ನು ವ್ಯಾಪಕವಾಗಿ ಹೆಚ್ಚಿಸಿಕೊಂಡು ಕೋವಿಡ್ 19 ಪಾಸಿಟಿವ್ ಪ್ರಕರಣಗಳನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡ ರಚಿಸಲಾಗಿದೆ.

ಸೋಂಕಿನ ಲಕ್ಷಣಗಳಿರುವ ವ್ಯಕ್ತಿಗಳು ತಪಾಸಣೆಗಾಗಿ ಸುತ್ತಾಡುತ್ತಿರುವುದರಿಂದ ಮತ್ತಷ್ಟು ಸೋಂಕು ಹರಡುವ ಸಾಧ್ಯತೆಗಳಿರುವುದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಪತ್ತೆ ಹಚ್ಚಲಾಗುವ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ತಂಡವನ್ನು ರಚಿಸಲಾಗಿದೆ.

ಈ ತಂಡವು ಸೋಂಕಿನ ಲಕ್ಷಣಗಳುಳ್ಳ ವ್ಯಕ್ತಿಗಳ ಸ್ಥಳಕ್ಕೆ ಬಂದು ಪರೀಕ್ಷೆ ಮಾಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಲು ಪಾಲಿಕೆ ವತಿಯಿಂದ ಕೋವಿಡ್ ಪರೀಕ್ಷೆಗಾಗಿ ಸಂಪರ್ಕಿಸಿ  ಎಂಬ ಪರಿಕಲ್ಪನೆಯಲ್ಲಿ ಪ್ರತ್ಯೇಕವಾದ ದೂ ಸಂ: 0824-2455674 ನ್ನು ನಿಗಧದಿಪಡಿಸಿಕೊಂಡು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ.ಈ ಸಹಾಯವಾಣಿ ಕೇಂದ್ರವು ಪ್ರತಿ ದಿನ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಕಾರ್ಯಾಚರಿಸಲಿದೆ. 

ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕಾರ್ಯಚರಣೆಯನ್ನು ನಡೆಸಲಾಗಿದ್ದು, ಜೂನ್ 11ರಂದು ಒಟ್ಟು 20 ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣಗಳು ಕಂಡು ಬಂದಿದ್ದು, ರೂ. 16,500 ದಂಡವನ್ನು ವಿಧಿಸಲಾಗಿದೆ ಎಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು