8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆ: ನದಿ ಪಾತ್ರದ ಮರಳು ತೆರವು; ಇ-ಸ್ಯಾಂಡ್ ಆ್ಯಪ್ ಮೂಲಕ ಹೊಯಿಗೆ ಲಭ್ಯ

18/05/2022, 08:33

ಸಾಂದರ್ಭಿಕ ಚಿತ್ರ
ಉಡುಪಿ(reporterkarnataka.com):  ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಝಡ್ ಮತ್ತು ನಾನ್ ಸಿ.ಆರ್.ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ ಮರಳು ತೆರವುಗೊಳಿಸುವ ಕಾರ್ಯ ಕೈಗೊಂಡಿರುವ ಹಿನ್ನೆಲೆ, ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳನ್ನು ಸಾರ್ವಜನಿಕರಿಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಪೂರೈಸಲಾಗುತ್ತಿದೆ. 

ಪ್ರಸ್ತುತ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ, ತಾತ್ಕಾಲಿಕ ಮರಳು ಪರವಾನಿಗೆದಾರರು, ಮರಳು ಗುತ್ತಿಗೆದಾರರು, ವಾಹನ ಮಾಲೀಕರು ಹಾಗೂ ಚಾಲಕರು ರೇನ್ ಟಿ4ಯು ಜಿ.ಪಿ.ಎಸ್ ಸಂಸ್ಥೆಯಿAದ ಯುಸರ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಪಡೆದು, ಇ.ಎಮ್ ವಿಷನ್ ಆ್ಯಪ್ ಮೂಲಕ ಮರಳು ಸಾಗಾಣಿಕೆ ವಾಹನಗಳ ಚಲನವಲನಗಳನ್ನು ಹಾಗೂ ಸಾರ್ವಜನಿಕರು, ಕಂದಾಯ, ಪೊಲೀಸ್, ಆರ್.ಟಿ.ಓ ಹಾಗೂ ಇತರೆ ಇಲಾಖೆಗಳು ಸ್ಯಾಂಡಿ ಉಡುಪಿ ಆ್ಯಪ್ ಮೂಲಕ ವಾಹನಗಳ ಚಾಲಕರು ಮರಳು ಸಾಗಾಣಿಕೆ ಮಾಡುವ ಕುರಿತು ಪರಿಶೀಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 0820-2950088, 2572333 ಹಾಗೂ ಆಪ್‌ನ ಮಾಹಿತಿಗಾಗಿ ರೇನ್ ಟಿ4ಯು ಪ್ರೆöÊ.ಲಿ, ಅಂಬಾಗಿಲು ರಸ್ತೆ, ಪೆರಂಪಳ್ಳಿ, ಉಡುಪಿ, ಮೊಬೈಲ್ ಸಂಖ್ಯೆ: 8310738476, 9611712361, 8050121886 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು