10:09 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲೆಯಲ್ಲಿ 274 ಕ್ರೀಡಾ ಅಂಕಣ ನಿರ್ಮಾಣ: ಅರ್ಜಿ ಆಹ್ವಾನ

18/05/2022, 08:38

ಉಡುಪಿ(reporterkarnataka.com) :ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಯೋಗದೊಂದಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಸರ್ಕಾರಿ ಶಾಲೆ, ಕಾಲೇಜು, ವಸತಿ ನಿಲಯಗಳಲ್ಲಿ ಲಭ್ಯವಿರುವ ಸರ್ಕಾರಿ ಜಾಗಗಳಲ್ಲಿ, ಖೋ-ಖೋ, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಹಾಕಿ, ಗರಡಿ ಮನೆ/ ಕುಸ್ತಿ ಅಖಾಡ ಮತ್ತು ಶಟ್ಲ್ ಬ್ಯಾಡ್ಮಿಂಟನ್ ಕ್ರೀಡಾ ಅಂಕಣಗಳನ್ನು ನಿರ್ಮಿಸಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 274 ಕ್ರೀಡಾ ಅಂಕಣಗಳನ್ನು ನಿರ್ಮಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅರ್ಹ ಸರ್ಕಾರಿ ಶಾಲಾ, ಕಾಲೇಜು ಹಾಗೂ ವಸತಿ ನಿಲಯಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು