12:20 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಜೆ.ಆರ್. ಲೋಬೊ ಅವರಿಂದ ಫುಡ್ ಕಿಟ್ ವಿತರಣೆ: ಎಲ್ಲ ಓಕೆ, ಆದರೆ ಸಾಮಾಜಿಕ ಅಂತರ ಇಲ್ಲ ಯಾಕೆ?; ಇದು ಪ್ರಜ್ಞಾವಂತರ ಪ್ರಶ್ನೆ

16/06/2021, 15:42

ಮಂಗಳೂರು(reporterkarnatakanews) ಕೊರೊನಾ ಲಾಕ್ ಡೌನ್ ನ ಕಷ್ಟಕಾಲದಲ್ಲಿ ಮಂಗಳೂರು ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ವಿತರಿಸುತ್ತಿರುವ ಆಹಾರ ಕಿಟ್ ಗೆ ಎಲ್ಲೆಡೆ ನೂಕುನುಗ್ಗಲು ಉಂಟಾಗುತ್ತಿದೆ. ಜನರು ಆಹಾರವಿಲ್ಲದೆ ಎಷ್ಟು ಕಂಗೆಟ್ಟಿದ್ದರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ ಅಥವಾ ಯಾವುದೇ ಪಕ್ಷದವರಿರಲಿ ಕಷ್ಟಕಾಲದಲ್ಲಿ ಜನರ ನೆರವಿಗೆ ಧಾವಿಸುವುದು ಶ್ಲಾಘನೀಯ ವಿಷಯವಾಗಿದೆ. ಆದರೆ ಕಾಂಗ್ರೆಸ್ ಫುಡ್ ಕಿಟ್ ವಿತರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಮೇಲಿನ ಚಿತ್ರಗಳನ್ನು ಅವಲೋಕಿಸಿದಾಗ ಸಾರ್ವಜನಿಕರ ಆರೋಪ ಕೂಡ ನಿಜವಾದದ್ದು ಎನ್ನುವುದು ಸ್ಪಷ್ಟವಾಗುತ್ತದೆ.

ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಅವರ ಕಂಕನಾಡಿ ಬಿ ವಾರ್ಡ್ ನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ ಅವರು ತನ್ನ ವೈಯಕ್ತಿಕ ದೇಣಿಗೆಯಿಂದ ಫುಡ್ ಕಿಟ್ ಪೂರೈಸುತ್ತಿದ್ದಾರೆ. ಇದು ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ. ಬಡವರಿಗೆ, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ, ಆಟೋ ಡ್ರೈವರ್ ಗಳಿಂದ ಇದರಿಂದ ಬಹಳಷ್ಟು ಪ್ರಯೋಜನವಾಗಿದೆ. ಕೆಲವು ಕಡೆ ಕೊರೊನಾ ಸೋಂಕಿನಿಂದಲ್ಲ, ಹಸಿವಿನಿಂದ ಸಾಯುವ ಪರಿಸ್ಥಿತಿ ಏರ್ಪಟ್ಟಿತು. ಇಂತಹ ಸಂದರ್ಭದಲ್ಲಿ ಜೆ.ಆರ್. ಲೋಬೊ ಅವರ ಜನಸೇವೆ ಮೆಚ್ಚುವಂತದ್ದೇ ಎಂದು ಜನರು ಪಕ್ಷಬೇಧ ಮರೆತು ಸಂತೋಷ ವ್ಯಕ್ತಪಡಿಸುತ್ತಾರೆ. ಆದರೆ ‘ಎಲ್ಲ ಬಣ್ಣವನ್ನು ಮಸಿ ನುಂಗಿತು: ಎನ್ನುವ ಹಾಗೆ, ಸಾಮಾಜಿಕ ಅಂತರವಿಲ್ಲದೆ ಹಸಿದವರು ನೆರೆದ ಬಗ್ಗೆ ಕೆಲವರು ತಕರಾರು ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ಸನ್ನಿವೇಶದಲ್ಲಿ ಈ ಆರೋಪಕ್ಕೆ ಬೆಲೆಯೂ ಇದೆ. ನಾವು ಸ್ವಲ್ಪ ನಿರ್ಲಕ್ಷ್ಯ ವಹಿಸಿದರೂ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ.



ಹಾಗೆ ಕೆಪಿಟಿಯಲ್ಲಿ ಇತ್ತೀಚೆಗೆ ಯುವ ಕಾಂಗ್ರೆಸ್ ನಾಯಕ ಮೆರಿಲ್ ರೇಗೊ ನೇತೃತ್ವದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಯುವ ಕಾಂಗ್ರೆಸ್ ನಿಂದ ಲಸಿಕೆ ಆನ್ ಲೈನ್ ಬುಕ್ಕಿಂಗ್ ಬಗ್ಗೆ ಜಾಗೃತಿ ಅಭಿಯಾನ ನಡೆಯುತ್ತಿದೆ. ಈ ಎಲ್ಲ ಸಂದರ್ಭಗಳಲ್ಲಿ ಸಾಮಾಜಿಕ ಅಂತರದ ಕೊರತೆ ಎದ್ದು ಕಾಣುತ್ತಿದೆ ಎಂಬ ಆರೋಪವಿದೆ.  ಕಾಂಗ್ರೆಸ್ ಇನ್ನಾದರು ತಮ್ಮ ಸ್ವಯಂಸೇವಕರನ್ನು ಬಳಸಿಕೊಂಡು ಸಾಮಾಜಿಕ ಅಂತರಕ್ಕೆ ಪ್ರಾಧಾನ್ಯತೆ ಕೊಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು