1:00 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

1000 ರೂ. ದಾಟಿದ ಅಡುಗೆ ಅನಿಲ ದರ: ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯೂ ಹೆಚ್ಚಳ

19/05/2022, 13:39

ಹೊಸದಿಲ್ಲಿ(reporterkarnataka.com): ದಿನ ಬಳಕೆಯ ಅಗತ್ಯ ವಸ್ತುಗಳ ಜತೆಗೆ ಅಡುಗೆ ಅನಿಲ ದರ ಸ್ಪರ್ಧೆಗೆ ನಿಂತಿದೆ. ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ 1,000 ರೂ. ದಾಟಿದೆ. 

ಅಲ್ಲದೇ ವಾಣಿಜ್ಯ ಎಲ್‍ಪಿಜಿ ಗ್ಯಾಸ್ ದರವವನ್ನೂ ಸಹ ಏರಿಕೆ ಮಾಡಲಾಗಿದೆ. ಇಂದು (ಗುರುವಾರ)ದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು 3 ರೂಪಾಯಿ 50 ಪೈಸೆ ಹಾಗೂ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 8 ರೂ ನಷ್ಟು ಏರಿಸಲಾಗಿದೆ. ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಲಿದೆ. ಈ ಮೊದಲು 999.50 ರೂಪಾಯಿಗಳಾಗಿತ್ತು.

ಈ ಮೂಲಕ ಒಂದೇ ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಎರಡನೇ ಬಾರಿ ಏರಿಕೆ ಕಂಡಂತಾಗಿದೆ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಗಳಷ್ಟು ಬೆಲೆ ಹೆಚ್ಚಿಸಲಾಗಿತ್ತು. ಗೃಹಬಳಕೆಯ ಸಿಲಿಂಡರ್ ಜೊತೆಗೆ ವಾಣಿಜ್ಯ ಸಿಲಿಂಡರ್ ಬೆಲೆಯನ್ನೂ ಹೆಚ್ಚಳ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು