11:32 AM Saturday8 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಟಾಟಾ ಸನ್ಸ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್: ರತನ್ ಟಾಟಾ ಸಂತಸ

20/05/2022, 20:05

ಹೊಸದಿಲ್ಲಿ(reporterkarnataka.com): ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದ ಟಾಟಾ ಸನ್ಸ್ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು,  ಕೋರ್ಟ್ ತೀರ್ಪಿನಿಂದ ನಮ್ಮ ನ್ಯಾಯಾಂಗದ ಮೌಲ್ಯ, ವ್ಯವಸ್ಥೆ, ನೈತಿಕತೆಯನ್ನು ಬಲಪಡಿಸಿದೆ ಎಂದು ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳಿಗೆ ಮತ್ತೆ ಅಧ್ಯಕ್ಷರನ್ನಾಗಿ ನೇಮಿಸುವಂತೆ ನಿರ್ದೇಶಿಸಿದ್ದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧೀಕರಣದ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿತ್ತು.

ಇದೀಗ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಟಾಟಾ ಸಮೂಹ ಸಂಸ್ಥೆ ಮೇಲುಗೈ ಸಾಧಿಸಿದೆ. 

ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ,  ಸುಪ್ರೀಂ ಕೋರ್ಟ್ ನ ತೀರ್ಪಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಇದು ನಮ್ಮ ನ್ಯಾಯಾಂಗದ ಮೌಲ್ಯ ವ್ಯವಸ್ಥೆ ಮತ್ತು ನೈತಿಕತೆಯನ್ನು ಬಲಪಡಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು