ಇತ್ತೀಚಿನ ಸುದ್ದಿ
ಇನ್ನು ಮುಂದೆ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ. 33 ಮಹಿಳೆಯರಿಗೆ ಮೀಸಲು: ಸರಕಾರ ಆದೇಶ
21/05/2022, 20:22
ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುಬೇಕೆಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.