9:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಬೆಂಗಳೂರು: ಶಾಪಿಂಗ್​​ ಕಾಂಪ್ಲೆಕ್ಸ್​​ನಿಂದ ಬಿದ್ದು ಯುವತಿ ಸಾವು;ಯುವಕ ಗಂಭೀರ

22/05/2022, 10:28

ಬೆಂಗಳೂರು(reporterkarnataka.com):

ಶಾಪಿಂಗ್​​ಗೆ ಬಂದಿದ್ದ ಯುವ ಜೋಡಿಯೊಂದು ಕಾಂಪ್ಲೆಕ್ಸ್​​ನಿಂದ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು ಲಿಯಾ (18) ಎಂದು ಗುರುತಿಸಲಾಗಿದೆ. ಯುವಕ ಕ್ರಿಸ್ ಪೀಟರ್ ಗಂಭೀರ ಗಾಯಗೊಂಡಿದ್ದಾನೆ.

ಸೆಂಟ್ ಜೋಸೆಫ್ ಕಾಲೇಜ್​ನಲ್ಲಿ ದ್ವಿತೀಯ ವರ್ಷದ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾಗಿರುವ ಇಬ್ಬರೂ ಇವತ್ತು ಶಾಪಿಂಗ್​ಗೆ ಬಂದಿದ್ದರು. ಈ ವೇಳೆ ಕಾಲು ಜಾರಿ ಕಟ್ಟಡದ ಎರಡನೇ ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಹಿಡಿದುಕೊಳ್ಳಲು ಹೋಗಿ ಯುವಕ ಕೂಡ ಬಿದ್ದಿದ್ದಾನೆ. ಯುವತಿಯ ಮೇಲೆಯೇ ಯುವಕ ಬಿದ್ದಿದ್ದರಿಂದ ಬದುಕಿದ್ದಾನೆ. ಯುವಕನ ಕಾಲು ಮುರಿದಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಆದರೆ, ಯುವತಿ ಲಿಯಾ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.

ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು