9:22 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

2ನೇ ತರಗತಿ ವರೆಗೆ ಮಕ್ಕಳಿಗೆ ನೋ ಹೋಮ್ ವರ್ಕ್: ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ

22/05/2022, 10:36

ಬೆಂಗಳೂರು(reporterkarnataka.com):

ರಾಜ್ಯಾದ್ಯಂತ ಶಾಲೆ ಮೇ 16ರಿಂದ ಆರಂಭವಾಗಿದ್ದು, ಮಕ್ಕಳಿಗೆ ನೀಡುವ ಹೋಮ್ ವರ್ಕ್​​ಗೆ ಬ್ರೇಕ್ ಬೀಳುವ ನಿರೀಕ್ಷೆ ಇದೆ. ಇನ್ಮುಂದೆ ಶಿಕ್ಷಕರು 2ನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ.

ಸರ್ಕಾರಿ ಶಾಲೆಗಳಿಗೆ ಈ ವರ್ಷದಿಂದಲೇ ನಲಿ – ಕಲಿ ರೀತಿ ಮಾತ್ರ ಪುಟ್ಟ ಮಕ್ಕಳಿಗೆ ಶಿಕ್ಷಣ ಇರಲಿದೆ.

ಸರ್ಕಾರಿ ಶಾಲೆ ರೀತಿಯಲ್ಲಿ ಖಾಸಗಿ ಶಾಲೆಗೂ ಈ ಆದೇಶ ಹೊರಡಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ.‌ ಹೋಮ್ ವರ್ಕ್​ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ಹಾಗೂ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ಹಿನ್ನೆಲೆ ರಾಜ್ಯದಲ್ಲಿ ಮಕ್ಕಳಿಗೆ ಹೋಮ್ ವರ್ಕ್ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಹೀಗಾಗಿ ಖಾಸಗಿ ಶಾಲೆಗಳಲ್ಲಿ ಕನಿಷ್ಠ 2ನೇ ತರಗತಿವರೆಗೆ ಹೋಂ ವರ್ಕ್ ಬ್ರೇಕ್ ಹಾಕಲು ಶಿಕ್ಷಣ ಇಲಾಖೆ ಒಲವು ತೋರಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 2ನೇ ತರಗತಿವರೆಗೆ ಮಕ್ಕಳಿಗೆ ಹೋಂ ವರ್ಕ್ ನೀಡುವಂತಿಲ್ಲ ಎಂದು ಎನ್ಇಪಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. 1-2ನೇ ತರಗತಿ ಮಕ್ಕಳಿಗೆ ಆಟ, ಡ್ರಾಮಾ, ಪದ್ಯ ಹೇಳಿಸುತ್ತಾ ಹೀಗೆ ಚಟುವಟಿಕೆ ಮೂಲಕ ಪಾಠ ಮಾಡುವುದು. ಅಕ್ಷರ ಜ್ಞಾನ ಹಾಗೂ ಸಂಖ್ಯಾ ಜ್ಞಾನಕ್ಕೆ ಹೆಚ್ಚು ಒತ್ತು ನೀಡಲಾಗುತ್ತೆ ಎಂದಿದ್ದಾರೆ.

ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ಪದ್ಧತಿ ಜಾರಿಯಲ್ಲಿದೆ. ಇನ್​ಇಪಿ ಜಾರಿ ಮುನ್ನವೇ ಖಾಸಗಿ ಶಾಲೆಯಲ್ಲೂ ಹೋಂ ವರ್ಕ್ ಸ್ಥಗಿತಗೊಳಿಸುವ ಕುರಿತು ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು