8:49 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮಡಿಕೇರಿ: ಅಲ್ಯುಮಿನಿಯಂ ಏಣಿಗೆ ವಿದ್ಯುತ್‌ ಸ್ಪರ್ಶಿಸಿ ವೃದ್ಧ ಕಾರ್ಮಿಕ ದಾರುಣ ಸಾವು

22/05/2022, 22:44

ಮಡಿಕೇರಿ(reporterkarnataka.com):ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಮರ-ಗಿಡಗಳ ಕೊಂಬೆಗಳನ್ನು ಕಡಿಯುತ್ತಿದ್ದ ಸಂದರ್ಭ ಕಾರ್ಮಿಕರೊಬ್ಬರು ಸಾವಿಗೀಡಾದ ಘಟನೆ ನಾಪೋಕ್ಲು ಸಮೀದ ಕಕ್ಕಬ್ಬೆ- ಮರಂದೋಡ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಆಚಾರಿ ರುದ್ರಪ್ಪ(65) ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಸಮಯದಲ್ಲಿ ವಿದ್ಯುತ್ ನಿಗಮದ ಲೈನ್’ಮೆನ್’ ಜೊತೆಯಲ್ಲಿ ಮರದ‌ ಕೊಂಬೆ ಕಡಿಯಲೆಂದು ಮರಕ್ಕೆ ಅಲ್ಯೂಮಿನಿಯಂ ಏಣಿಯನ್ನು ಇರಿಸಿದಾಗ, ಆಕಸ್ಮಿಕವಾಗಿ ಏಣಿ ವಿದ್ಯುತ್ ತಂತಿಗೆ ತಗುಲಿ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.

ಮೃತರು ಪತ್ನಿ ಸೀತಮ್ಮ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಮನೆಗೆ ಆಸರೆಯಾಗಿದ್ದ ಗಂಡನ ಸಾವಿನಿಂದ ಕುಟುಂಬ ಬೀದಿ ಪಾಲಾಗಿದೆ. ಇದಕ್ಕೆ ಚೆಸ್ಕಾಂ ನೇರ ಹೊಣೆಯಾಗಿದ್ದು, ಕೂಡಲೇ ಮೃತ ರುದ್ರಪ್ಪ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರ ಪರವಾಗಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚಂಡೀರ ಜಗದೀಶ್ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಠಾಣಾಧಿಕಾರಿ ಸದಾಶಿವ ಮತ್ತು ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು