1:44 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ಆಶಾ ಕಾರ್ಯಕರ್ತೆಯರಿಗೆ ವಿಶ್ವ ಆರೋಗ್ಯ ಸಂಸ್ಥೆ ಗೌರವ: ಪ್ರಧಾನಿ ಮೋದಿ ಅಭಿನಂದನೆ

23/05/2022, 18:08

ಹೊಸದಿಲ್ಲಿ(reporterkarnataka.com): ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ.ಟೆಡ್ರೊಸ್‌ ಅಧಾನೊಮ್ ಘೆಬ್ರೆಯೆಸಸ್ ಅವರು ಭಾರತದ ಆಶಾ ಕಾರ್ಯಕರ್ತೆಯರಿಗೆ ʻಜಾಗತಿಕ ಆರೋಗ್ಯ ನಾಯಕʼ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ, ಆರೋಗ್ಯಕರ ಭಾರತ ಅಭಿಯಾನದಲ್ಲಿ ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದಾರೆ ಎಂದು ಹೇಳಿದರು.

“ಭಾರತದಲ್ಲಿ ಆಶಾ ಕಾರ್ಯಕರ್ತರ ತಂಡಕ್ಕೆ WHO ಮಹಾನಿರ್ದೇಶಕರು ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿಯನ್ನು ನೀಡಿರುವುದಕ್ಕೆ ಸಂತೋಷವಾಗಿದೆ. ಆರೋಗ್ಯಕರ ಭಾರತವನ್ನು ಖಾತ್ರಿಪಡಿಸುವಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತೆಯರ ಸಮರ್ಪಣಾ ಮನೋಭಾವ ಪ್ರಶಂಸನೀಯವಾಗಿದೆ” ಎಂದರು.

ಆಶಾ (ಹಿಂದಿಯಲ್ಲಿ ಭರವಸೆ ಎಂದರ್ಥ) ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು ಅಥವಾ ಆಶಾ ಕಾರ್ಯಕರ್ತೆಯರು. ಗ್ರಾಮೀಣ ಭಾರತದ ಸಂಪರ್ಕ ಬಿಂದುವಾಗಿದ್ದಾರೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದಂತ ಸಂಕಷ್ಟ ಕಾಲದಲ್ಲಿ ಮನೆ-ಮನೆಗೆ ತೆರಳಿ ಕೊರೊನಾ ವೈರಸ್ ಪೀಡಿತರನ್ನು ಪತ್ತೆ ಹಚ್ಚಿ ಚಿಕಿತ್ಸೆ ದೊರೆಯುವಂತೆ ಮಾಡುವ ಮೂಲಕ ಗ್ರಾಮೀಣ ಭಾರತದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹಳ ಮುಖ್ಯವಾದುದಾಗಿದೆ.

ರೋಗಗಳನ್ನು ತಡೆಗಟ್ಟಬಹುದಾದ ಲಸಿಕೆ, ಸಮುದಾಯ ಆರೋಗ್ಯ ರಕ್ಷಣೆ, ಅಧಿಕ ರಕ್ತದೊತ್ತಡ ಮತ್ತು ಕ್ಷಯರೋಗಕ್ಕೆ ಚಿಕಿತ್ಸೆ, ಪೌಷ್ಟಿಕತೆ, ನೈರ್ಮಲ್ಯ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಚಾರ, ಮಕ್ಕಳಿಗೆ ತಾಯಿಯ ಆರೈಕೆ ಈ ಎಲ್ಲಾ ಕ್ಷೇತ್ರಗಳಲ್ಲಿ ಆಶಾ ಕಾರ್ಯಕರ್ತೆಯರು ಅವಿರತವಾಗಿ ಶ್ರಮಿಸಿದ್ದಾರೆ ಎಂದು WHO ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

“ಜಗತ್ತು ಅಸಮಾನತೆ, ಸಂಘರ್ಷ, ಆಹಾರ ಅಭದ್ರತೆ, ಹವಾಮಾನ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ರೋಗಗಳ ಅಭೂತಪೂರ್ವ ಒಮ್ಮುಖವನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ಪ್ರಶಸ್ತಿಯು ಪ್ರಪಂಚದಾದ್ಯಂತ ಆರೋಗ್ಯವನ್ನು ರಕ್ಷಿಸಲು ಮತ್ತು ಉತ್ತೇಜಿಸಲು ಅತ್ಯುತ್ತಮ ಕೊಡುಗೆ ನೀಡಿದವರನ್ನು ಗುರುತಿಸುತ್ತದೆ” ಎಂದು WHO ಮಹಾನಿರ್ದೇಶಕ ಡಾ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅಭಿಪ್ರಾಯಪಟ್ಟಿದ್ದಾರೆ.

ಆಶಾ ಕಾರ್ಯಕರ್ತರನ್ನು ಶ್ಲಾಘಿಸಿದ WHO ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕ ಡಾ ಪೂನಂ ಖೇತ್ರಪಾಲ್ ಸಿಂಗ್, “ಆಶಾ ಕಾರ್ಯಕರ್ತೆಯರು ಆರೋಗ್ಯದ ನಿಜವಾದ ಚಾಂಪಿಯನ್ ಆಗಿದ್ದು, ಪ್ರಾಥಮಿಕ ಆರೋಗ್ಯವನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಹಾಯ ಮಾಡುತ್ತಾರೆ. ಅವರ ಕೆಲಸ ಯಾವಾಗಲೂ ಇತರರಿಗೆ ಮಾದರಿಯಾಗಿದೆ, ವಿಶೇಷವಾಗಿ ಸಾಂಕ್ರಾಮಿಕ ಕಾಯಿಲೆ ಸಮಯದಲ್ಲಿ ಅವರು ಮಾಡಿದ ಸೇವೆಯನ್ನು ಗಮನಿಸಿ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು