6:27 PM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಡಾ.ಬಿ. ಯಶೋವರ್ಮ ಅಂತಿಮ ದರ್ಶನ: ಉಜಿರೆಯಲ್ಲಿ ಅಂಗಡಿ ಮುಗ್ಗಟ್ಟು ಬಂದ್

24/05/2022, 11:15

ಬೆಳ್ತಂಗಡಿ(reporterkarnataka.com): ಉಜಿರೆ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ. ಯಶೋವರ್ಮ ಅವರ ಪಾರ್ಥಿವ ಶರೀರವನ್ನು ಉಜಿರೆ ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಮೃತರ ಗೌರವಾರ್ಥವಾಗಿ ಉಜಿರೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಶೋಕ ಆಚರಿಸಲಾಗುವುದು.

ಯಶೋವರ್ಮ ಅವರ ಪಾರ್ಥೀವ ಶರೀರವನ್ನು ಇಂದು ಉಜಿರೆ ವೃತ್ತದಿಂದ ಎಸ್‌ಡಿಎಂ ಕಾಲೇಜ್‌ವರೆಗೆ ಅಭಿಮಾನಿಗಳ ಪಾದಯಾತ್ರೆಯ ಮೆರವಣಿಗೆಯಲ್ಲಿ ಕರೆತಂದು ಅಂತಿಮ ದರ್ಶನಕ್ಕೆ 

ಉಜಿರೆ ಕಾಲೇಜಿನಲ್ಲಿ ಮಧ್ಯಾಹ್ನ 2ರಿಂದ ಸಂಜೆ 5.30 ರವರೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಹಾಗೆಯೇ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಇಂದು ಸಂಜೆ 7 ಗಂಟೆಯವರೆಗೆ ಉಜಿರೆ ಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ಥಗಿತಗೊಳಿಸುವುದಾಗಿ ವರ್ತಕ ಸಂಘದ ಅಧ್ಯಕ್ಷ ಅರವಿಂದ್ ಕಾರಂತ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಬಳಿಕ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಎಲ್ಲಾ ಶಾಲಾ ಕಾಲೇಜುಗಳಿಗೆ ನಿನ್ನೆ ರಜೆ ನೀಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು