2:04 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

27ರಿಂದ 29ರ ವರೆಗೆ ಪಣಂಬೂರು ಬೀಚ್ ನಲ್ಲಿ ಸರ್ಫಿಂಗ್: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ

24/05/2022, 22:31

ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಇದೇ ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ಸರ್ಫಿಂಗ್ ಕ್ರೀಡೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನ್ಯಾಷನಲ್  ಸರ್ಫಿಂಗ್ ಫೆಸ್ಟಿವಲ್ 2022 ಕುರಿಂತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಅಪಾಯಗಳು, ಅವಘಡಗಳು ಸಂಭವಿಸದಂತೆ ಕಟ್ಟುನಿಟ್ಟಿನ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಸಮುದ್ರದ ಅಲೆಗಳ ಮೇಲೆ ಆಡುವ ಸರ್ಫಿಂಗ್ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ, ಆದಕಾರಣ ಲೈಫ್ ಗಾರ್ಡ್ ಗಳು,ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದರು.

ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳು ಅವಘಡಗಳು ಆಗದಂತೆ ಎಚ್ಚರ ವಹಿಸಬೇಕು.

ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು, ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾದ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು, ಮುಖ್ಯವಾಗಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್  ಫೆಡರೇಷನ್  ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ,  ಎನ್ ಎಂ ಪಿ ಟಿಯ ಸಿವಿಲ್  ಇಂಜಿನಿಯರ್ ಶಶಿಧರ್ ಸೇರಿದಂತೆ ಸಂಬಂಧಿಸಿದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು