7:49 PM Thursday24 - September 2026
ಬ್ರೇಕಿಂಗ್ ನ್ಯೂಸ್
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ

ಇತ್ತೀಚಿನ ಸುದ್ದಿ

ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಭಿನ್ನಮತ ಉಪಶಮನಕ್ಕೆ ಹೊರತು ಮುಖ್ಯಮಂತ್ರಿ ಬದಲಾವಣೆಗೆ ಅಲ್ಲ!

16/06/2021, 18:45

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆ ಕುರಿತು ಚರ್ಚಿಸಲಿದ್ದಾರೆ.

ಮಧ್ಯಾಹ್ನ 3.45ರ ವೇಳೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಕುಮಾರಕೃಪಾ ಗೆಸ್ಟ್ ಹೌಸ್ ಗೆ ತೆರಳಿದ್ದಾರೆ. ನಂತರ ಪಕ್ಷದ ವಿವಿಧ ನಾಯಕರು ಹಾಗೂ ಶಾಸಕರುಗಳ ಜತೆ ಸಭೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ಅರುಣ್ ಸಿಂಗ್ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ. ಅರುಣ್ ಸಿಂಗ್ ಅವರು ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಉಪಶಮನಗೊಳಿಸಲು ವಿವಿಧ ನಾಯಕರ ಜತೆ ಸಭೆ ನಡೆಸಲಿದ್ದಾರೆ ಹೊರತು ರಾಜ್ಯದ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ನಡೆಸುವುದಿಲ್ಲ ಎಂದು ಪಕ್ಷದ ವಿಶ್ವಸನೀಯ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು