11:08 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಚಿಂತೆ ಬಿಟ್ಟು ಮನೆ ಕಟ್ಟಿ; ದ.ಕ.ಜಿಲ್ಲೆಯಲ್ಲಿ ಭರಪೂರ ಮರಳು ಲಭ್ಯವಂತೆ: ಹೀಗೆಂತ ಸ್ವತಃ ಜಿಲ್ಲಾಧಿಕಾರಿಗಳೇ ಹೇಳುತ್ತಾರೆ

26/05/2022, 14:40

ಮಂಗಳೂರು(reporterkarnataka.com): ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧ ಹಿನ್ನೆಲೆಯಲ್ಲಿ ಮರಳಿನ ದರದಲ್ಲಿ ಏರಿಕೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಅದು ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯಲ್ಲಿ ಭರಪೂರ ಮರಳು ಸಂಗ್ರಹವಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ಪಷ್ಟಪಡಿಸಿದರು. 

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತದೆ. ಸಿಹಿನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ. ಮರಳು ಮಿತ್ರ ಆ್ಯಪ್‍ನಲ್ಲಿ ಅರ್ಜಿ ಸಲ್ಲಿಸಿ 7,000 ರೂ.ಗಳಿಗೆ 10 ಮೆಟ್ರಿಕ್ ಟನ್ ಮರಳು ಪಡೆಯಬಹುದು. ಜಿಎಸ್‍ಟಿ ಮತ್ತು ಸಾಗಾಟ ವೆಚ್ಚದೊಂದಿಗೆ ನಿರ್ಮಾಣ ಕಾಮಗಾರಿಗೆ ಅಗತ್ಯ ಮರಳನ್ನು ಖರೀದಿಸಬಹುದು ಎಂದು ತಿಳಿಸಿದರು.


ಅದ್ಯಪಾಡಿ ಮತ್ತು ಶಂಭೂರು ಮರಳು ಸ್ಟಾಕ್ ಯಾರ್ಡ್ ನಲ್ಲಿ ಕ್ರಮವಾಗಿ 9,000 ಮತ್ತು 12,000 ಮೆಟ್ರಿಕ್ ಟನ್ ಲಭ್ಯವಿದೆ. ಸಂಗ್ರಹಿಸಿಡಲು ಜಾಗದ ಕೊರತೆ ಇದೆ. ಬೇಡಿಕೆಗೆ ತಕ್ಕಂತೆ ಮರಳು ಜಿಲ್ಲೆಯ ನಿರ್ಮಾಣ ಕಾಮಗಾರಿಗೆ ಲಭ್ಯವಾಗಲಿದೆ. ಹೊರ ಜಿಲ್ಲೆಯಿಂದಲೂ ಮರಳಿಗೆ ಬೇಡಿಕೆ ಇದ್ದರೂ ಅನುಮತಿ ನೀಡಲಾಗಿಲ್ಲ. ಸದ್ಯ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಮರಳು ಪೂರೈಕೆಗೆ ಕ್ರಮ ವಹಿಸಲಾಗುವುದು. ಹಾಗಾಗಿ ಯಾರೂ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು