ಇತ್ತೀಚಿನ ಸುದ್ದಿ
ನಾಳೆ(ಜೂ.17) ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ಇಲ್ಲ
16/06/2021, 20:31
ಮಂಗಳೂರು (ReporterKarnataka.com)
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕಾ ಶಿಬಿರವು ಜೂ.17ರಂದು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಕ್ಕಳಿಗೆ ರಾಷ್ಟ್ರೀಯ ಚುಚ್ಚುಮದ್ದು ಕಾರ್ಯಕ್ರಮ ಇರುವುದರಿಂದ ಪ್ರಾಥಾಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಶಿಬಿರಗಳು ಇರುವುದಿಲ್ಲ.
ಕೋವಾಕ್ಸಿನ್ ಲಸಿಕೆಯ ಮೊದಲ ಡೋಸ್ ಪಡೆದು 28 ದಿನ ಪೂರೈಸಿದ ಅರ್ಹ ಫಲಾನುಭವಿಗಳಿಗೆ ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಲಸಿಕೆಯನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.