6:04 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಜೂ.1ರಂದು ದ.ಕ. ಜಿಲ್ಲೆಗೆ ಮುಖ್ಯಮಂತ್ರಿ: ರೈತ ವಿದ್ಯಾನಿಧಿ ಫಲಾನುಭವಿಗಳೊಂದಿಗೆ  ಸಂವಾದ

27/05/2022, 22:41

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಜಿಲ್ಲೆಯ ಫಲಾನುಭವಿಗಳಾಗಿರುವ ರೈತರ ಮಕ್ಕಳೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಂವಾದ ನಡೆಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಶುಕ್ರವಾರ ನಗರದ ಜಿಲ್ಲಾ ಪಂಚಾಯತ್‍ನ ಮಿನಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಪ್ರವಾಸದ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾದ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯಡಿ ಜಿಲ್ಲೆಯ 22 ಸಾವಿರ ವಿದ್ಯಾರ್ಥಿಗಳು ಪ್ರಯೋಜನ ಪಡೆದಿದ್ದಾರೆ. ಈ ಯೋಜನೆಯ ಬಗ್ಗೆ ಫಲಾನುಭವಿಗಳಾಗಿರುವ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿಯವರು ನೇರವಾಗಿ ಮಾತನಾಡಿ, ಯೋಜನೆಯ ಸಾಧಕಗಳ ಬಗ್ಗೆ ತಿಳಿದುಕೊಳ್ಳಲಿದ್ದಾರೆ, ಅದಕ್ಕಾಗಿ ರೈತ ವಿದ್ಯಾ ನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲು ಅನುಕೂಲವಾಗುವಂತೆ ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಐಟಿಐ, ಡಿಪ್ಲಮೋ, ತಾಂತ್ರಿಕ ಶಿಕ್ಷಣ ಸೇರಿದಂತೆ ಇತರೆ ಕೋರ್ಸುಗಳಲ್ಲಿರುವ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. 

ಕಾರ್ಯಕ್ರಮದ ಆಮಂತ್ರಣ, ವೇದಿಕೆ, ಬ್ಯಾಕ್‍ಡ್ರಾಪ್ ಸೇರಿದಂತೆ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು. 

ಮೂಡುಬಿದ್ರೆ ಶಾಸಕ ಉಮನಾಥ್ ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಮಿಶ್ರ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸುಧಾಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು