2:27 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ

28/05/2022, 12:29

ಬೆಂಗಳೂರು(reporterkarnataka.com):  ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಈಗಾಗಲೇ ನಿಗದಿಯಾಗಿರುಂತೆ  ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ   ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು. 

ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು  ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಅವರು ಬಣ್ಣಿಸಿದರು. 

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ,  ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆಘಿ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು. 

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ  ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು. 

ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ  ಎಂದರು. 

ನವೆಂಬರ್ ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು  ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ  ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ  ಎಂಬು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು