11:28 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ

ಇತ್ತೀಚಿನ ಸುದ್ದಿ

ಜೈಲು ಸಿಬ್ಬಂದಿಗಳನ್ನು ಶೌಚಾಲಯಕ್ಕೆ ತಳ್ಳಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ: ಶಿವಮೊಗ್ಗ ಬಳಿ ಮತ್ತೆ ಬಂಧನ

28/05/2022, 13:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೈಲು ಸಿಬ್ಬಂದಿಯನ್ನ ಆಸ್ಪತ್ರೆ ಶೌಚಾಲಯದೊಳಗಿ ತಳ್ಳಿ ತಪ್ಪಿಸಿಕೊಂಡಿದ್ದ ಕೈದಿಯೊಬ್ಬನನ್ನು ಕಡೂರು ಪೊಲೀಸರು ಜೈಲು ಸಿಬ್ಬಂದಿ ಜತೆ ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಅನಾರೋಗ್ಯದ ನಿಮಿತ್ತ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಧನರಾಜ್ ಎಂಬಾತನನ್ನು ಆಸ್ಪತ್ರೆ ಸೇರಿಸಲಾಗಿತ್ತು. ಕಡೂರು ಮೂಲದ ಧನರಾಜ್ ಜೈಲು ಸಿಬ್ಬಂದಿಯನ್ನ ಆಸ್ಪತ್ರೆ ಶೌಚಾಲಯದೊಳಗಿ ತಳ್ಳಿ ತಪ್ಪಿಸಿಕೊಂಡಿದ್ದ.

ಇದೀಗ ಕಡೂರು ಪೋಲೀಸರು ಜೈಲು ಸಿಬ್ಬಂದಿಗಳ ಜತೆ ನಡೆಸಿದ ಜಂಟೀ ಕಾರ್ಯಾಚರಣೆಯಲ್ಲಿ ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ಬಂಧಿಸಲಾಗಿದೆ.

ಕಡೂರು ಪಿಎಸ್ ಐ ರಮ್ಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಇದೀಗ ಕೈದಿ ತಪ್ಪಿಸಿಕೊಂಡ 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು