3:49 AM Sunday24 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಲಾರಿ- ಕಾರು ಮುಖಾಮುಖಿ ಡಿಕ್ಕಿ: ಅದೃಷ್ಟವಶಾತ್  ಪ್ರಯಾಣಿಕರು ಅಪಾಯದಿಂದ ಪಾರು

29/05/2022, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.‌ ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರಿಗೆ ಕಾರ್ಕಳ ಕಡೆಯಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ತರಕಾರಿ ಲಾರಿ ಡಿಕ್ಕಿ ಹೊಡೆದಿದೆ. ಇದು ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಾಗಿದ್ದು, ಇತ್ತೀಚಿಗೆ ಅಗಲೀಕರಣ ಮಾಡಲಾಗಿದೆ. ವಾಹನ ಸವಾರರು ಮನಸ್ಸಿಗೆ ಬಂದ ಹಾಗೆ ಸಂಚಾರ ಮಾಡುವುದರಿಂದ ಈ ರೀತಿ ಅಪಘಾತಗಳು ಆಗಾಗ ನಡೆಯುತ್ತಲೇ ಇದೆ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು