2:33 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಕುದ್ರು ಡೆಸ್ಟಿನ್ ಹೋಟೆಲಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ: ವ್ಯವಸ್ಥೆ, ಸೌಲಭ್ಯ ಬಗ್ಗೆ ಮೆಚ್ಚುಗೆ

30/05/2022, 17:36

ಮಂಗಳೂರು(reporterkarnataka.com):  ನಗರದ ಅಳಕೆಯಲ್ಲಿರುವ ಕುದ್ರು ಡೆಸ್ಟಿನ್ ಹೋಟೆಲಿಗೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭಾನುವಾರ ಭೇಟಿ ನೀಡಿ ಹೋಟೆಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 

ನೂತನವಾಗಿ ನಿರ್ಮಾಣಗೊಂಡ ಕುದ್ರು ಡೆಸ್ಟಿನ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ ನೀಡಿದ ಗೃಹ ಸಚಿವರು, ಅಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳ ಕುರಿತು ಸಂತಸ ವ್ಯಕ್ತಪಡಿಸಿದರು. ಅತೀ ವೇಗದಲ್ಲಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಉದ್ಯಮಶೀಲತೆಯನ್ನು ಬೆಳೆಸಲು ತರುಣರು ಮುಂದಾಗಬೇಕು ಎಂದು ಶುಭ ಹಾರೈಸಿದರು.

ಶಾಸಕ ಡಿ. ವೇದವ್ಯಾಸ್ ಕಾಮತ್, ಕುದ್ರು ಡೆಸ್ಟಿನ್ ಮಾಲಕರಾದ ನಂದನ್ ಶೆಣೈ, ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಬಿಜೆಪಿ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಮಂಗಲ್ಪಾಡಿ ನರೇಶ್ ಶೆಣೈ, ರಮೇಶ್ ಮಲ್ಯ, ದೇವಾನಂದ ಪೈ, ಮಾಜಿ ಉಪ ಮೇಯರ್ ರಾಜೇಂದ್ರ ಕುಮಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಶ್ರೀಕಾಂತ್ ಶೆಣೈ, ಜನಾರ್ದನ್ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು