4:29 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ: ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ 

30/05/2022, 22:15

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 31 ಹಾಗೂ ಜೂನ್ 1ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 31ರ ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.30ಕ್ಕೆ ಬಜ್ಪೆಯಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಮಣಿಪಾಲ್‍ಗೆ ತೆರಳಿ ವಾಸ್ತವ್ಯ ಮಾಡುವರು. 

ಜೂ.1ರ ಮಧ್ಯಾಹ್ನ 1.30ಕ್ಕೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಿಂದ ರಸ್ತೆ ಮೂಲಕ ಹೊರಟು 2.30ಕ್ಕೆ ಮೂಡುಬಿದರೆಗೆ ಆಗಮಿಸುವರು. 3 ಗಂಟೆಗೆ ಆಳ್ವಾಸ್ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿರುವ ವಿದ್ಯಾನಿಧಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. 

ಸಂಜೆ 5 ಗಂಟೆಗೆ ಮೂಡುಬಿದಿರೆಯಿಂದ ಹೊರಟು 6 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.50ಕ್ಕೆ ವಿಮಾನದ ಮೂಲಕ ಹೊರಟು 7.40ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು