6:49 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಣಕಲ್ : ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ; ರೈತರ ಮನೆ ಬಾಗಿಲಿಗೆ ಕೃಷಿ ಸೌಲಭ್ಯ

31/05/2022, 08:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಬಣಕಲ್ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಹಾಗೂ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಅಶೋಕ್ ಕುಮಾರ್ (ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರು) ಮಾತನಾಡಿ, ಕೃಷಿ ಇಲಾಖೆಯು ರೈತರ ಮನೆ ಬಾಗಿಲಿಗೆ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಪ್ರತಿಯೊಬ್ಬ ರೈತರು ಇದರ ಸದುಪಯೋಗ ಪಡಿಸಿಕೊಂಡು ಕೃಷಿಯಲ್ಲಿ ಸ್ವಾವಲಂಬಿಯಾಗಿ ಬದುಕಬೇಕೆಂದು ಹೇಳಿದರು. 

ಪಿ.ಕೆ ನಾಗೇಶ್ (ಕಾರ್ಯದರ್ಶಿಗಳು ಕೃಷಿಕ ಸಮಾಜ ಮೂಡಿಗೆರೆ) ಅವರು ಮಾತನಾಡಿ, ರೈತರು ಅತಿ ಕಷ್ಟವನ್ನು ಅನುಭವಿಸುತ್ತಿದ್ದು ಇಂಥ ಒಂದು ಕಷ್ಟವನ್ನು ಸರ್ಕಾರ ಹಾಗೂ ಇಲಾಖೆ ಅತ್ಯುನ್ನತ ಯೋಜನೆಗಳನ್ನು ರೂಪಿಸಿ ಬೆಂಬಲವನ್ನು ನೀಡಿ ರೈತರನ್ನು ಸ್ವಾವಲಂಬಿ ಹಾಗೂ ದೇಶದ ಅತ್ಯುನ್ನತ ಆರ್ಥಿಕತೆಯನ್ನು ಹೊಂದಲು ಸಹಾಯ ಮಾಡಬೇಕೆಂದು ತಿಳಿಸಿದರು.

ವನಶ್ರೀ ಲಕ್ಷ್ಮಣಗೌಡ (ರಾಜ್ಯ ಮಹಿಳಾ ರೈತ ಸಂಘದ ಉಪಾಧ್ಯಕ್ಷರು)  ಅವರು ಮಾತನಾಡಿ ದೇಶಕ್ಕೆ ಅನ್ನ ನೀಡುವ ರೈತರು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ ಆದರೂ ಸಹ ರೈತರು ಕೃಷಿಯನ್ನು ಬಿಡದೆ ಅದರಲ್ಲಿನ ಜೀವನವನ್ನು ಸಾಗಿಸುತ್ತಿದ್ದಾರೆ ಹಾಗೇನೆ ಪ್ರಕೃತಿ ವಿಕೋಪಗಳಿಂದ ರೈತರು ಹಲವಾರು ಪೆಟ್ಟುಗಳನ್ನು ತಿಂದಿದ್ದಾನೆ ಆದರೂ ಸಹ ರೈತನು ಕೃಷಿಯನ್ನು ಮುಂದುವರಿಸಿ ಇಡೀ ಜಗತ್ತಿಗೆ ಅನ್ನವನ್ನು ನೀಡುತ್ತಿದ್ದಾನೆ ಎಂದು ತಿಳಿಸಿದರು. 

ಗ್ರಾಮ ಪಂಚಾಯಿತಿ ಸದಸ್ಯರಾದ  ವಿನಯ್ ಕುಮಾರ್ ಕುಮಾರ್ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿಗಳಾದ ಶ್ವೇತ,ಪ್ರದೀಪ್, ಗೋಪಾಲ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ  ಸಿಬ್ಬಂದಿಗಳು ಹಾಗೂ ರೈತರು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು