4:10 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಲ್ಲ ಖಾತೆಗಳಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಆರೋಪ: ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಎಳೆಯುತ್ತಾ ಲಕ್ಷಣ ರೇಖೆ ?

17/06/2021, 13:20

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಬಂದಿರುವ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಲಕ್ಷ್ಮಣ ರೇಖೆ ಎಳೆಯುತ್ತಾರೆಯೇ ಎನ್ನುವ ಕುತೂಹಲ ಸಾರ್ವಜನಿಕರಲ್ಲಿ ಕಾಡಲಾರಂಭಿಸಿದೆ.

ಎಲ್ಲರ ಖಾತೆಗಳಲ್ಲೂ ಮುಖ್ಯಮಂತ್ರಿ ಪುತ್ರ ಕೈಯಾಡಿಸುತ್ತಿದ್ದಾರೆ ಎಂಬ ಆರೋಪ ಹಲವು ಸಮಯದಿಂದ ಬಿಜೆಪಿಯಲ್ಲಿ ಕೇಳಿ ಬರುತ್ತಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದನ್ನು

ಗಂಭೀರವಾಗಿ ಪರಿಗಣಿಸುತ್ತಾರೆಯೇ ಎಂಬ ಪ್ರಶ್ನೆ ಭಿನ್ನಮತೀಯ ಶಾಸಕರಲ್ಲಿ ಕಾಡಲಾರಂಭಿಸಿದೆ.

ಇದರೊಂದಿಗೆ ಪಕ್ಷ ಮತ್ತು ಸಂಪುಟದಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ ಎನ್ನಲಾಗಿದೆ. ಸಂಪುಟದಲ್ಲಿರುವ ಕೆಲವು ಹಳೆಯ ಮುಖಗಳಿಗೆ ಕೋಕ್ ಕೊಟ್ಟು ಹೊಸಬರನ್ನು ಸೇರಿಸುವುದು ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇದರಲ್ಲಿ ಸೇರಿದೆ ಎಂದು ರಿಪೋರ್ಟರ್ ಕರ್ನಾಟಕಕ್ಕೆ ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಇಲ್ಲ ಎಂದು ಅರುಣ್ ಸಿಂಗ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಸಂಜೆ ದಿಲ್ಲಿಗೆ ಹೋದ ಮೇಲೆ ರಾಜ್ಯ ಬಿಜೆಪಿಗೆ ಹೈಕಮಾಂಡ್ ನಿಂದ ಸೂಚನೆಗಳು ರವಾನೆಯಾಗುವ ಸಾಧ್ಯತೆಗಳಿವೆ. ಅದರಲ್ಲಿ ಮುಖ್ಯಮಂತ್ರಿ ಪರ ಬಣ ಹಾಗೂ ವಿರೋಧಿ ಬಣಕ್ಕೂ ಬಿಸಿ ಮುಟ್ಟಿಸುವ ಅಂಶಗಳು ಮ ಇರುತ್ತವೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು