12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಹಾಡುತ್ತಾ ಕುಸಿದು ಬಿದ್ದು ಅಸುನೀಗಿದ ಖ್ಯಾತ ಗಾಯಕ ಕೆಕೆ !

01/06/2022, 06:58


ಕೊಲ್ಕತ್ತಾ(Reporterkarnataka.com):
ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್‌ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್‌ನಲ್ಲಿ ಪಾಲ್ಗೊಂಡ ಕೆಕೆ ಹಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆ ದಾಖಲಿಸಿದರು ಪ್ರಯೋಜನವಾಗಿಲ್ಲ.

ಕೋಲ್ಕತಾದಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮಕ್ಕಾಗಿ ಕೆಕೆ ತಂಡ ಮೇ.30ಕ್ಕೆ ನಗರದಲ್ಲಿ ಬೀಡುಬಿಟ್ಟಿತ್ತು. ಸಂಗೀತ ಕಾರ್ಯಕ್ರಮದ ಕುರಿತು ಕೆಕೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂತಸ ಹಂಚಿಕೊಂಡಿದ್ದರು. ಕೆಕೆ ಸಂಗೀತ ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ತುಂಬಿದ್ದರು. ಆದರೆ ಹಾಡುತ್ತಲೇ ಕುಸಿದ ಬಿದ್ದ ಕೆಕೆ ಬದುಕಿ ಬರಲೇ ಇಲ್ಲ.

ವೇದಿಕೆಯಲ್ಲಿ ಕುಸಿದ ಕೆಕೆಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು. ಅಷ್ಟೇ ವೇಗದಲ್ಲಿ ನಗರದ CMRI ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಕೆಕೆ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು