7:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತೆರಿಗೆ ವಂಚಕರ ಬೇಟೆ: ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚು ಕಡೆ ಐಟಿ ದಾಳಿ

01/06/2022, 22:40

ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಆದಾಯ ತೆರಿಗೆ ದಾಳಿ ಇಲಾಖೆ ನಡೆದಿದೆ. ಐಟಿ ಅಧಿಕಾರಿಗಳು ಬುಧವಾರ ರಾಜ್ಯದ 50ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ.

600ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಸರ್ಚ್ ವಾರೆಂಟ್ ತಂದು ಮನೆ ಹಾಗೂ ಕಚೇರಿಗಳನ್ನು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಆದಾಯ ಮರೆಮಾಚಿ ಐಟಿ ರಿಟರ್ನ್ಸ್ ಸಲ್ಲಿಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಐಟಿ ರಿಟರ್ನ್ಸ್ ಸಲ್ಲಿಕೆಗಿಂತ ಹೆಚ್ಚಿನ ಆದಾಯ ಹೊಂದಿರುವುದನ್ನು ಪತ್ತೆ ಮಾಡಿ ದಾಳಿ ಮಾಡಲಾಗಿದೆ ಎಂದು ಐಟಿ ಮೂಲಗಳು ತಿಳಿಸಿವೆ.

ಗೋವಾ – ಕರ್ನಾಟಕ ಅಧಿಕಾರಿಗಳ ತಂಡ ದಾಳಿಯಲ್ಲಿ ಭಾಗಿಯಾಗಿದ್ದು, ಲೆಕ್ಕಪತ್ರಗಳ ಶೋಧನೆ ನಡೆಸುತ್ತಿದ್ದಾರೆ. ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಸದಾಶಿವನಗರದ ಎಂಬೆಸ್ಸಿ ಆರ್ಕೆಡ್ ಅಪಾರ್ಟ್ಮೆಂಟ್ ನ
ಫ್ಲ್ಯಾಟ್ ವೊಂದರ ಮೇಲೆ ದಾಳಿ ನಡೆಸಲಾಗಿದೆ. ನಾಲ್ವರು ಅಧಿಕಾರಿಗಳ ತಂಡ ಮನೆಯಲ್ಲಿ ತಪಾಸಣೆ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು