ಇತ್ತೀಚಿನ ಸುದ್ದಿ
ಮೂಡಿಗೆರೆ: 1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಸರ್ವೇ ಸೂಪರ್ ವೈಸರ್ ಎಸಿಬಿ ಬಲೆಗೆ
02/06/2022, 13:55
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಲಂಚ ಪಡೆಯುತ್ತಿದ್ದ ಸರ್ವೆ ಸೂಪರ್ವೈಸರ್ ಎಸಿಬಿ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.
1 ಲಕ್ಷ ರೂ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಸರ್ವೇ ಸೂಪ್ರವೈಸರ್ ಪ್ರಕಾಶ್ ಸಿಕ್ಕಿ ಬಿದ್ದಿದ್ದಾರೆ.
ಜಮೀನು ಪಕ್ಕಾ ಪೋಡ್ ಮಾಡಿಕೊಡಲು ಪ್ರಕಾಶ್ ಅವರು 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇದೀಗ ಹಣ ತೆಗೆದುಕೊಳ್ಳುತ್ತಿದ್ದಾಗಲೇ
ಮೂಡಿಗೆರೆ ತಾಲೂಕು ಕಚೇರಿ ಬಳಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಗೋಣಿಬೀಡು ಗ್ರಾಮದ ಮಹೇಶ್ ಎಂಬುವವರಿಂದ ಮುಂಗಡ 1 ಲಕ್ಷ ಹಣ ಪಡೆಯುವಾಗ ಎಸಿಬಿ ಬಲೆಗೆ ಸಿಲುಕಿದ್ದಾರೆ.
ಎಸಿಬಿ ಎಸ್ಪಿ ಸೈಮನ್, ಇನ್ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಾರ್ಯಾಚರಣೆ.