2:55 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಅಕ್ರಮ ಕಿಡ್ನಿ ಮಾರಾಟ ಜಾಲ ಬಯಲು: ದೆಹಲಿ ಪೋಲೀಸರಿಂದ ವೈದ್ಯ ಸೇರಿದಂತೆ 10 ಮಂದಿ ಬಂಧನ

02/06/2022, 15:06

ಹೊಸದಿಲ್ಲಿ(reporterkarnataka.com): ಅಕ್ರಮ ಮಾರಾಟದ ಸಾಲಿಗೆ ಈಗ ಮಾನವ ಅಂಗಾಂಗಳು ಕೂಡ ಸೇರಿವೆ.

ಅಕ್ರಮ ಕಿಡ್ನಿ ಮಾರಾಟ ದಂಧೆಯನ್ನು ದೆಹಲಿ ಪೋಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 

ಬಂಧಿತರಲ್ಲಿ ಒಬ್ಬ ಸ್ವತಃ ವೈದ್ಯನಾಗಿದ್ದು ಉಳಿದವರು ವೈದ್ಯಕೀಯ ತಂತ್ರಜ್ಞರು ಮತ್ತು ಸಹಾಯಕರಾಗಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಹೌಜ್‌ ಖಾಸ್‌ ಪ್ರದೇಶದಲ್ಲಿ ಅಕ್ರಮ ಕಿಡ್ನಿ ಕಸಿ ದಂಧೆಯ ಕುರಿತು ಪ್ರಕರಣ ದಾಖಲಾಗಿತ್ತು. ಇದರ ತನಿಖೆಯ ವೇಳೆ 10 ಜನರ ಜಾಲವನ್ನು ಭೇದಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ. ಈ ಗುಂಪಿನ ಸದಸ್ಯರು ಬಡವರನ್ನು ಗುರುತಿಸಿ ಅವರಿಗೆ ಹಣದ ಆಸೆ ತೋರಿಸಿ ಕಿಡ್ನಿ ಮಾರಲು ಪುಸಲಾಯಿಸುತ್ತಿದ್ದರು. ಅವರಿಂದ ಕಿಡ್ನಿ ಪಡೆದು ಅಗತ್ಯವಿರುವ ಶ್ರೀಮಂತರಿಗೆ ಅದನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಪ್ರಸ್ತುತ 10 ಆರೋಪಿಗಳನ್ನು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ಜಾರಿಯಲ್ಲಿದೆ ಎಂದು ಮೂಲಗಳು ವರದಿ ಮಾಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು