4:39 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ: ಪತ್ರಕರ್ತರ ಮೇಲಿನ ಹಲ್ಲೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ  ಖಂಡನೆ

03/06/2022, 12:43

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ  ಹಾಕಿ ವಿಡಿಯೋ ತುಣುಕುಗಳನ್ನು ಡಿಲೀಟ್ ಮಾಡಿದ್ದಲ್ಲದೆ  ಜೀವ ಬೆದರಿಕೆಯೊಡ್ಡಿರುವ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.

ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೆಗೊಳ್ಕಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಘಟನಾವಳಿಗೆ ಸಂಬಂಧಿಸಿದಂತೆ  ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ತಪ್ಪಿತಸ್ಥತರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು