12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚೀನಾದಲ್ಲಿ ಭೂಕಂಪ: 14,427 ಮಂದಿ ಬೀದಿಪಾಲು 4,500ಕ್ಕಿಂತ ಹೆಚ್ಚು ಜನರ ಸ್ಥಳಾಂತರ

03/06/2022, 21:59

ಬೀಜಿಂಗ್ (reporterkarnataka.com): ನೈಋತ್ಯ ಚೀನಾದ ಸಿಚುವಾನ್‌ನಲ್ಲಿರುವ ಯಾನ್ ನಗರದಲ್ಲಿ ಬುಧವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ನಾಲ್ವರು ಸಾವನ್ನಪಿದ್ದಾರೆ.

41 ಮಂದಿ ಗಾಯಗೊಂಡಿದ್ದಾರೆ. 14,427ಕ್ಕೂ ಅಧಿಕ ಮಂದಿ ಮನೆ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಭೂಕಂಪದಿಂದ ಒಟ್ಟು 14,427 ಜನರು ಬಾಧಿತರಾಗಿದ್ದಾರೆ ಎಂದು ಪ್ರಾಥಮಿಕ ಅಂಕಿಅಂಶಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ತುರ್ತು ರಕ್ಷಣಾ ಪ್ರಯತ್ನಗಳಿಗೆ ಮಾರ್ಗದರ್ಶನ ನೀಡಲು ಮತ್ತು ಸಹಾಯ ಮಾಡಲು ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸ್ಥಳೀಯ ಅಗ್ನಿಶಾಮಕ ದಳ, ತುರ್ತು ರಕ್ಷಣಾ, ಸಶಸ್ತ್ರ ಪೊಲೀಸ್, ವೈದ್ಯಕೀಯ ಸಿಬ್ಬಂದಿ ಮತ್ತು ಸಾರ್ವಜನಿಕ ಭದ್ರತಾ ಕಚೇರಿ ಸೇರಿದಂತೆ 800ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈಗಾಗಲೇ ಭೂಕಂಪ ಪೀಡಿತ ಪ್ರದೇಶಗಳಿಗೆ ಕಳುಹಿಸಲಾಗಿದೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 4,500ಕ್ಕಿಂತ ಹೆಚ್ಚು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಭೂಕಂಪದಿಂದ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ಇದೀಗ ಸುಮಾರು 14,427 ಮಂದಿ ನಿರಾಶ್ರತಿರಾಗಿರುವುದಾಗಿ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು