3:58 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕುಕ್ಕಿಕಟ್ಟೆಯಲ್ಲಿ ಬೈಕ್ ಸ್ಕಿಡ್: ಸಹ ಸವಾರ ಸಾವು 

05/06/2022, 10:43

ಹಿರಿಯಡ್ಕ(reporterkarnataka.com):

ಪಲ್ಸರ್ ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸಹಸವಾರ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್‌ ಸಮೀಪ ಜೂನ್ 3ರಂದು‌ ನಡೆದಿದೆ.

ಮೃತರನ್ನು ಕೊಳಲಗಿರಿಯ ಲಿಗೋರಿ ಡಿಸೋಜ ಎಂದು ಗುರುತಿಸಲಾಗಿದೆ. ಲಿಗೋರಿ ಡಿಸೋಜ ಜೂ.3ರಂದು ಕೆಲಸದ ನಿಮಿತ್ತ ಜಾಯಿಲ್ ಡಿಸೋಜ ಎಂಬವರ ಪಲ್ಸರ್ ಬೈಕ್ ನಲ್ಲಿ ಕುಕ್ಕೆಹಳ್ಳಿಗೆ ಹೋಗಿದ್ದರು. ಅಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳಿ ಬರುತ್ತಿದ್ದ ವೇಳೆ ಕುಕ್ಕಿಕಟ್ಟೆ ಮಾಧವ ಪ್ರಭು ಹಾರ್ಡ್ ವೇರ್‌ ಸಮೀಪ ಬೈಕ್ ಸ್ಕಿಡ್ ಆಗಿದೆ. ಇದರ ಪರಿಣಾಮ ಸಹಸವಾರ ಲಿಗೋರಿಯವರ ತಲೆಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ತಕ್ಷಣವೇ ಅದೇ ದಾರಿಯಲ್ಲಿ ಹೋಗುತ್ತಿದ್ದ. ವೀರೇಂದ್ರ ಆಚಾರ್ ಹಾಗೂ ಅಶ್ವಿನ್ ಎಂಬವರು ಮಣಿಪಾಲ ಕೆಎಂಸಿ ಅಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಿಗೋರಿ ಮೃತಪಟ್ಟಿದ್ದಾರೆ. ಸವಾರ ಜಾಯಿಲ್‌ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು