ಇತ್ತೀಚಿನ ಸುದ್ದಿ
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನ ಪಿ. ಚಿದಂಬರಂ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಸಹಿತ 41 ಮಂದಿ ಅವಿರೋಧ ಆಯ್ಕೆ
05/06/2022, 13:31
ಹೊಸದಿಲ್ಲಿ(reporterkarnataka.com); ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಿಗದಿಯಾಗಿದ್ದು, ಇದರಲ್ಲಿ 11 ರಾಜ್ಯಗಳಿಂದ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.
ಉತ್ತರ ಪ್ರದೇಶದಲ್ಲಿ 11, ತಮಿಳುನಾಡಿನಲ್ಲಿ 6, ಬಿಹಾರದಲ್ಲಿ 5, ಆಂಧ್ರ ಪ್ರದೇಶದಲ್ಲಿ 4, ಮಧ್ಯಪ್ರದೇಶ ಮತ್ತು ಒಡಿಶಾದಲ್ಲಿ ತಲಾ ಮೂವರು, ಛತ್ತೀಸ್‌ಗಢ, ಪಂಜಾಬ್, ತೆಲಂಗಾಣ ಮತ್ತು ಜಾರ್ಖಂಡ್‌ನಲ್ಲಿ ತಲಾ ಇಬ್ಬರು ಮತ್ತು ಉತ್ತರಾಖಂಡದಲ್ಲಿ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನ ಪಿ. ಚಿದಂಬರಂ ಮತ್ತು ರಾಜೀವ್ ಶುಕ್ಲಾ, ಬಿಜೆಪಿಯ ಸುಮಿತ್ರಾ ವಾಲ್ಮೀಕಿ ಮತ್ತು ಕವಿತಾ ಪಾಟಿದಾರ್, ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್, ಆರ್‌ಜೆಡಿಯ ಮಿಸಾ ಭಾರತಿ ಮತ್ತು ಆರ್‌ಎಲ್‌ಡಿಯ ಜಯಂತ್ ಚೌಧರಿ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದವರಲ್ಲಿ ಪ್ರಮುಖರಾಗಿದ್ದಾರೆ.
ಹರಿಯಾಣ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾವುದೇ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿಲ್ಲ.