11:35 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ

06/06/2022, 22:00

ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ  ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ತಂಡವೊಂದು‌ ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡೆಸಿತ್ತು. ಕೆಲವು ವರ್ಷಗಳ ಹಿಂದೆ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.

ಇದೀಗ ಚರಣ್ ರಾಜ್ ಕೊಲೆಗೆ ಸಂಬಂಧಿಸಿದಂತೆ

ನಾಲ್ವರು ಆರೋಪಿಗಳಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಶದಲ್ಲಿರುವವರನ್ನು

ಕೆಯ್ಯೂರು ನಿವಾಸಿ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಕಿಶೋರ್ ಪೂಜಾರಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಚರಣ್ ರಾಜ್ ಎಂಬಾತನನ್ನು ಕಲ್ಲಡ್ಕದ ಕಿಶೋರ್‍ ಪೂಜಾರಿ ತಂಡವು ಹತ್ಯೆ ಮಾಡಿತ್ತು ಎಂಬ ಆರೋಪವಿದೆ.

ಕಾರ್ಯಾ ಚರಣೆಯಲ್ಲಿ ದಕ್ಷಿಣ ಕನ್ನಡ ಎಸ್‌.ಪಿ ಸೋನಾವಣೆ ಋಷಿಕೇಷ್‌ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಉದಯ ರವಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು