3:41 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಉಳ್ಳಾಲ ಲಕ್ಷ್ಮೀ ನರಸಿಂಹ ದೇವಳಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಆಗಮನ  

07/06/2022, 17:41

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಉಳ್ಳಾಲ ಕ್ಷೇತ್ರದ ತಿರುಮಲ ತಥಾ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಪುನಃ ಪ್ರತಿಷ್ಠಾ ಶತಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಶ್ರೀ ಮಹಾ ವಿಷ್ಣು ಯಾಗ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ದೇವಳಕ್ಕೆ ಚಿತ್ತೈಸಿದರು.


ಶ್ರೀಗಳವರಿಗೆ ಉಳ್ಳಾಲ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಮಾಜ ಭಾಂಧವರು ಪೂರ್ಣ ಕುಂಭ ಸ್ವಾಗತದಿಂದ ಬರಮಾಡಿಕೊಂಡರು . ಶ್ರೀ ಮಹಾ ವಿಷ್ಣು ಯಾಗವು ಸೋಮವಾರದಿಂದ ಪ್ರಾರಂಭಗೊಂಡಿದ್ದು ಬುಧವಾರದವರೆಗೆ ನಡೆಯಲಿರುವುದು . ದಿನಾಂಕ ೦೮ . ೦೬ . ೨೦೨೨ ರಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ನಡೆಯಲಿರುವುದು . ಮಂಗಳವಾರ ಶ್ರೀಗಳವರಿಂದ ಸಮಾಜ ಬಾಂಧವರಿಗೆ ತಪ್ತ ಮುದ್ರಾಧಾರಣೆ , ಶ್ರೀದೇವರಿಗೆ ಶತ ಕಲಶಾಭಿಷೇಕ ನಡೆಯಲಿರುವುದು . ಈ ಎಲ್ಲಾ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ದೇವಳದ ಆಡಳಿತ ಮಂಡಳಿ ವಿನಂತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು