1:31 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೊರೊನಾ ನಿಯಮಾನುಸಾರ ಗುತ್ತಿಗೆ ಹೊರಗುತ್ತಿಗೆ ಕೊರೊನಾ ವಾರಿಯರ್ಸ್‌ಗಳಿಗೆ ಪರಿಹಾರ ನೀಡಬೇಕಾಗಿ ಮನವಿ

08/05/2021, 14:59

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ(Reporter Karnataka News): ಕೊರೊನಾ ವಾರಿಯರ್ಸ್ ಆಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೊರೊನಾ ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಗುತ್ತಿಗೆ ಪೌರ ಕಾರ್ಮಿಕರು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಗುತ್ತಿಗೆ ಹಾಗೂ ಹೊರ ಗುತ್ತಿಗೆ ಆಧಾರ ಮೇಲೆ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಈಚೆಗೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಅವರ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಿಲ್ಲ. ಇದರಿಂದ ದುಡಿಯುವ ವ್ಯಕ್ತಿಗಳನ್ನು ಕಳೆದುಕೊಂಡ ಅವರ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಕೊರೊನಾ ಸಂಕಷ್ಟದ ನಡುವೆ ಕೊರೊನಾ ವಾರಿಯರ್ಸ್ ಸೇವೆಗೆ ಹೆಚ್ಚಿನ ಮಹತ್ವವಿದೆ. ಮನವಿ ಪತ್ರವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಸರ್ಕಾರದ ನಿಯಮಾನುಸಾರ ಪರಿಹಾರ ಕೊಡಿಸಲು ಪ್ರಾಮಾನಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ, ಸಿಇಒ ರಾಜೇಶ್ವರಿ, ಸ್ಥಳೀಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ನಾಗೇಶ್, ಸಂತೊಷ್, ಟಿ.ವಿ.ಸುರೇಶ್ ಬಾಬು, ಸುರೇಶ್, ಶ್ರೀನಾಥ್, ಬಾಬು ಪ್ರಮೋದ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು