6:55 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು

18/06/2021, 07:57

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com 

ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದೆಯಷ್ಟೇ ಕಿತ್ತು ಹೋದ ಸೇತುವೆ ಮೇಲಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಸೇತುವೆಯು ಕೊಳಬಾಳ್ ಮಸ್ಕಿ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ದಾರಿಯ ಮದ್ಯದ ಕುರುಕುಂದಾ ಗ್ರಾಮದಲ್ಲಿದೆ. ಸೇತುವೆ ಕಿತ್ತು ಹೋಗಿರುವುದರಿಂದ ಹಳ್ಳದ ಆ ಕಡೆಗಿರುವ ಸಾವಿರಾರು ಎಕರೆ ಕೃಷಿ ಭೂಮಿಗೆ ತೆರಳುವ ರೈತರಿಗೆ ಬಹಳ ತೊಂದರೆಯಾಗಿದೆ. ಕೃಷಿ ಚಟುವಟಿಕೆಗಳಿಗೂ ಇದರಿಂದ ಬಹಳಷ್ಟು ತೊಂದರೆಯಾಗಿದೆ.

ಹಿಂದಿನ ಶಾಸಕರ ಪ್ರತಾಪ್ ಗೌಡ ಪಾಟೀಲ್ ಅಧಿಕಾರವಾಧಿಯಲ್ಲಿ ಸೇತುವೆ ಕಿತ್ತು ಹೋಗಿದ್ದು, ನೂತನ ಶಾಸಕ ಬಸನಗೌಡ ತುರುವಿಹಾಳ ಇದನ್ನು ದುರಸ್ತಿಪಡಿಸುವ ಆಶಾಭಾವನೆಯನ್ನು ಇಲ್ಲಿನ ರೈತರು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು