ಇತ್ತೀಚಿನ ಸುದ್ದಿ
ಇನ್ನೂ 3 ದಿನ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ: ಸಮುದ್ರಕ್ಕೆ ಇಳಿಯದಂತೆ ಸೂಚನೆ
10/06/2022, 20:10
ಬೆಂಗಳೂರು(reporterkarnataka.com): ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಜೂನ್ 12 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇಂದು ಬೆಂಗಳೂರು, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗೂರು, ಹಾಸನ, ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ, ಉತ್ತರಕನ್ನಡ ದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ ಇದೆ.