8:51 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಂಪ್ಯೂಟರ್ ಪರೀಕ್ಷೆ ಪಾಸಾಗಿಲ್ಲವೇ?: ಹಾಗಾದರೆ ಸರಕಾರಿ ಸಿಬ್ಬಂದಿಗಳಿಗಿಲ್ಲ ಪ್ರಮೋಶನ್, ವಾರ್ಷಿಕ ವೇತನ ಬಡ್ತಿ

11/06/2022, 09:21

ಬೆಂಗಳೂರು(reporterkarnataka.com): ನಿಮ್ಮ ಹುದ್ದೆ ದೊಡ್ಡದೇ? ಸಿಕ್ಕಾಪಟ್ಟೆ ವೇತನವಿದೆಯೇ? ಕಂಪ್ಯೂಟರ್ ಗೊತ್ತಿಲ್ಲವೇ? 

ಸಹಾಯಕರನ್ನಿಟ್ಟುಕೊಂಡು ಕೆಲಸ ಮಾಡಿಸುತ್ತಿದ್ದೀರಾ? ಹಾಗಾದರೆ ಸರಕಾರದ ಹೊಸ ಆದೇಶದ ಪ್ರಕಾರ ನಿಮಗಿನ್ನು ಕಷ್ಟದ ದಿನಗಳು ಎದುರಾಗಲಿದೆ.

ಯಾಕೆಂದರೆ ಸರಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಪರೀಕ್ಷೆ ತೆಗೆದುಕೊಳ್ಳದ ಅಧಿಕಾರಿಗಳು ಮತ್ತು ನೌಕರರ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಸುಮಾರು 5.40 ಲಕ್ಷ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸರ್ಕಾರ ಆದೇಶ ನೀಡಿದ್ದು, ಸುಮಾರು 2.50 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಮತ್ತು ನೌಕರರು ಬರೆದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ 1,73,500 ಅಧಿಕಾರಿಗಳು, ನೌಕರರು ಉತ್ತೀರ್ಣರಾಗಿದ್ದಾರೆ.

ಇನ್ನೂ ಸುಮಾರು 3.5 ಲಕ್ಷ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಳ್ಳಬೇಕಾಗಿದ್ದು, ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮಾಡಿಕೊಳ್ಳಲು ಡಿಸೆಂಬರ್ 31 ರ ವರೆಗೆ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಉತ್ತೀರ್ಣರಾಗದ ನೌಕರರು ಮತ್ತು ಅಧಿಕಾರಿಗಳು ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು