2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!!

11/06/2022, 14:09

ಮಂಗಳೂರು(reporterkarnataka.com): 

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದಿಗೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ತೆರಳಿದರೂ ತೆರವು ಕಾರ್ಯಾಚರಣೆ ನಡೆದಿಲ್ಲ. 

ಪಾಲಿಕೆಯ ಸದಸ್ಯೆ ಸಂಗಿತಾ ಆರ್.ನಾಯಕ್ 
ಹಾಗೂ ಸ್ಥಳಿಯರು ತೆರವು ಮಾಡಲು ತಡೆಯೊಡ್ಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ 7 ಗಂಟೆಗೆ ಕಾರ್ಯಾಚರಣೆಗೆ ಸಿದ್ಧತೆ ನಡೆಸಿದ್ದರೂ ಈ ವಿಷಯ ಗೊತ್ತಾಗಿ ಮನೆಯೊಳಗೆ ಮಹಿಳೆಯರು ಸೇರಿದಂತೆ ಮನೆ ಮಂದಿಯನ್ನು ಮಲಗಿಸಿ ಕಾರ್ಯಾಚರಣೆಗೆ ಅಡ್ಡಿಪಡಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಪ್ರದೇಶದಲ್ಲಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಭೂಮಿಯಲ್ಲಿ 

ಕಾರ್ಪೊರೇಟರ್ ನೆರವಿನಿಂದ ಅಕ್ರಮವಾಗಿ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಒಂದು ಮನೆಯ ಗೃಹಪ್ರವೇಶ ಕೂಡ ಆಗಿದೆ.

ಇಲ್ಲಿ ಸುಮಾರು 2 ಎಕರೆ ಭೂಮಿ ಇದ್ದು, ಈ ಹಿಂದೆ ಅದರಲ್ಲಿ ಕೆಲವು ಪೌರ ಕಾರ್ಮಿಕರು ಸಕ್ರಮವಾಗಿ ಮನೆ ನಿರ್ಮಿಸಿ ವಾಸಿಸುತ್ತಿದ್ದಾರೆ. ಉಳಿದ ಶೇ. 75ರಷ್ಟು ಖಾಲಿ ನಿವೇಶನವಿದ್ದು, ಪೌರ ಕಾರ್ಮಿಕರಿಗೆ ಮೀಸಲಿಡಲಾಗಿದೆ. ಆದರೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಈ ಜಾಗದಲ್ಲಿ ಈ ಹಿಂದೆ 2020 ರಲ್ಲಿ ಅಪರಿಚಿತರು ಅಕ್ರಮವಾಗಿ 9 ಮನೆ ನಿರ್ಮಾಣಕ್ಕೆ ಅಡಿಪಾಯ ನಿರ್ಮಿಸುವಾಗ ಸ್ಥಳೀಯರು ಪಾಲಿಕೆಯ ಗಮನಕ್ಕೆ ತಂದಿದ್ದರು. ಇದೀಗ ಅಲ್ಲಿ ಒಂದು ಮನೆ ಗೃಹ ಪ್ರವೇಶವಾಗಿ, 10 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು