6:03 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 7 ಡಿಜಿಟಲ್ ವಿವಿ ಶೀಘ್ರದಲ್ಲೇ ಸ್ಥಾಪನೆ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ

11/06/2022, 23:08

ಬೆಳಗಾವಿ(reporterkarnataka.com):
ರಾಜ್ಯದಲ್ಲಿ 7 ಡಿಜಿಟಲ್‌ ವಿಶ್ವವಿದ್ಯಾಲಯಗಳನ್ನು ಶೀಘ್ರದಲ್ಲೇ
ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿಯಲ್ಲಿ ಶನಿವಾರ ವಿಧಾನ ಪರಿಷತ್‌ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತಾಂತ್ರಿಕ ಜ್ಞಾನ ಹಾಗೂ ಕೌಶಲ ಸಾಮರ್ಥ್ಯ ಹೆಚ್ಚಾಗಿದೆ. ಇದನ್ನು ಬಳಸಿಕೊಂಡು ವಿಶಿಷ್ಟ ರೀತಿಯ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು ಎಂದರು. 

ಬೆಂಗಳೂರಿನ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ‘ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಮೆಡಿಕಲ್ ರಿಸರ್ಚ್‌’ ಆರಂಭಿಸಲಾಗುತ್ತಿದೆ ಎಂದು ನುಡಿದರು.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಮುಗಿಯಲಿದೆ. ಪದವಿ ಕಾಲೇಜುಗಳಲ್ಲಿ 6,000 ಸ್ಮಾರ್ಟ್‌ಕ್ಲಾಸ್‌ ತೆರೆಯಲು ಆದೇಶಿಸಿದ್ದೇನೆ. ಏಳು ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ವಿವರಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು