5:23 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೊದಲು ತೀರ್ಪು, ನಂತರ ವಿಚಾರಣೆ: ಇದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಟೈಲ್!

18/06/2021, 08:01

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯ ಬಿಕ್ಕಟ್ಟು ಶಮನ ಮಾಡಲೆಂದು ಆಗಮಿಸಿದ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಕೇಳುವ ಮುನ್ನವೇ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ಉತ್ತಮ ಕೆಲಸ ಮಾಡುತ್ತಿದೆ ಎಂದು ಬೆಂಗಳೂರಿನ ಏರ್ ಫೋರ್ಟ್ ನಲ್ಲೇ ಹೇಳಿಕೆ ನೀಡಿದ್ದರು. ಶಾಸಕರ ಅಭಿಪ್ರಾಯ ಆಲಿಸುವ ಮುನ್ನವೇ ಸಿಂಗ್ ಅವರು ಸರ್ಟಿಫಿಕೇಟ್ ನೀಡಿಯಾಗಿದೆ. ಇದೊಂದು ವಿಚಾರಣೆ ನಡೆಸುವ ಮುನ್ನವೇ ತೀರ್ಪು ಕೊಟ್ಟಂತಾಗಿದೆ.

ಬಿಜೆಪಿಯಲ್ಲಿ ಹೊಗೆಯಾಡುತ್ತಿರುವ ಅಸಮಾಧಾನದ ಕುರಿತು ಅರಿತುಕೊಳ್ಳಲು ಬಂದ ಅರುಣ್ ಸಿಂಗ್ ಅವರು ಮೊದಲಿಗೆ ಭಿನ್ಬಮತೀಯ ಶಾಸಕರ ಅಭಿಪ್ರಾಯವನ್ನು ಕ್ರೋಢೀಕರಿಸಬೇಕಿತ್ತು. ನಂತರ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ಪಕ್ಷದ ಶಾಸಕರುಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಸಬೇಕಿತ್ತು. ಇದೆಲ್ಲ ಮುಗಿದ ಬಳಿಕ ಅವರು ತನ್ನ ಅಭಿಪ್ರಾಯ ಮಂಡಿಸಬೇಕಿತ್ತು. ಅದೆಲ್ಲ ಬಿಟ್ಟು ಅರುಣ್ ಸಿಂಗ್ ಅವರು ಬೆಂಗಳೂರಿಗೆ ಕಾಲಿಡುತ್ತಿದ್ದಂತೆ ‘ಯಡಿಯೂರಪ್ಪ ಸೇಫ್’ ಅಂತ ಘೋಷಿಸಿಯೇ ಬಿಟ್ಟರು. ಯಡಿಯೂರಪ್ಪ ಸರಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕೊರೊನಾವನ್ನು ಚೆನ್ನಾಗಿ ನಿರ್ವಹಿಸುತ್ತಿದೆ ಎಂದು 

ಹೇಳುವುದಾದರೆ ಅವರು ರಾಜ್ಯಕ್ಕೆ ಬರುವ ಅವಶ್ಯಕತೆ ಏನಿತ್ತು?  ದಿಲ್ಲಿಯಲ್ಲೇ ಕುಳಿತು ಈ ಹೇಳಿಕೆಯನ್ನು ನೀಡಬಹುದಿತ್ತಲ್ಲ? ಅದಲ್ಲದೆ ಪ್ರಮುಖ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭೇಟಿಗೆ ಸಮಯ ನೀಡಿದ್ದರೂ ಕೊನೆಯ ಕ್ಷಣದಲ್ಲಿ ಅದನ್ನು ರದ್ದುಪಡಿಸಿದ್ದಾರೆ. ಯತ್ನಾಳ್ ಹೇಳಿಗೆ ನಾವು ಹೆಚ್ಚಿನ ಮಹತ್ವ ನೀಡುವುದಿಲ್ಲ, ನೀವು ಕೂಡ ಬಿಡಬೇಡಿ ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ. ಒಂದು ರೀತಿಯಲ್ಲಿ ಅರುಣ್ ಸಿಂಗ್ ಅವರಿಗೆ ಕರ್ನಾಟಕಕ್ಕೆ ಬಂದ ಉದ್ದೇಶವಾದರೂ ಏನು ಎನ್ನುವುದು ಅವರಿಗೇ ಸ್ಪಷ್ಟವಾಗಿ ಇದ್ದ ಹಾಗೆ ಕಾಣಿಸುತ್ತಿಲ್ಲ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು